ಸಾರಾಂಶ
ಸೂಕ್ತ ಸಮಯದಲ್ಲಿ ಗರ್ಭಧಾರಣೆ ಹಾಗೂ ಅಂತರ ಕಾಪಾಡುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಗೊಳ್ಳುತ್ತದೆ ಎಂಬ ಧ್ಯೇಯದೊಂದಿಗೆ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗೆ ಹೆಮ್ಮೆ ತರುತ್ತದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿ.ಮಂಜುನಾಥ್ ಹೇಳಿದರು. ರಾಮನಗರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ -2024 ರ ಕಾರ್ಯಕ್ರಮದಲ್ಲಿ ಮಾತನಾಡಿದರು.
-ವಿವಿಧ ಸಂಸ್ಥೆಗಳ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ರಾಮನಗರ: ಸೂಕ್ತ ಸಮಯದಲ್ಲಿ ಗರ್ಭಧಾರಣೆ ಹಾಗೂ ಅಂತರ ಕಾಪಾಡುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಗೊಳ್ಳುತ್ತದೆ ಎಂಬ ಧ್ಯೇಯದೊಂದಿಗೆ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗೆ ಹೆಮ್ಮೆ ತರುತ್ತದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿ.ಮಂಜುನಾಥ್ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ವಿವಿಧ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ -2024 ರ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ವಿವಿಗಳ ವಿದ್ಯಾರ್ಥಿಗಳಿಗೆ ಪೋಸ್ಟರ್ ರಚನೆ, ಸಾಕ್ಷ್ಯಚಿತ್ರ (ಕಿರು ಚಿತ್ರ) ಹಾಗೂ ವೀಡಿಯೋ ರೀಲ್ಸ್ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ರಾಜು, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಕುಮಾರ್, ಡಿಎಂಒ ಡಾ.ಶಶಿಧರ್, ಡಿಟಿಒ ಡಾ.ಕುಮಾರ್, ಟಿಎಚ್ಒ ಡಾ.ಉಮಾ, ವೈದ್ಯಾಧಿಕಾರಿ ಡಾ.ಹರ್ಷಿತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತಾ ಕೆ.ಜೆ, ಕಾಲೇಜಿನ ಉಪನ್ಯಾಸಕ ವಿಜಯ್, ಕಾಂತರಾಜು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ನಾಗೇಶ್, ಹಿರಿಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ದಾಸಪ್ಪ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಉಮಾದೇವಿ, ಪ್ರಿಯಾ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.