ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ: ಡಾ. ಆನಂದ ಗೋಟೂರು

| Published : Jun 29 2024, 12:35 AM IST

ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ: ಡಾ. ಆನಂದ ಗೋಟೂರು
Share this Article
  • FB
  • TW
  • Linkdin
  • Email

ಸಾರಾಂಶ

ಕುಷ್ಟಗಿ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಡೆಂಘೀ ಜ್ವರ ನಿಯಂತ್ರಣ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಕುಷ್ಟಗಿ

ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಗೋಟೂರು ಹೇಳಿದರು.

ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ, ವಾರಕ್ಕೆ ಒಂದು ದಿನ ಪ್ರತಿ ಶುಕ್ರವಾರ ಎನ್ನುವ ವಿಶಿಷ್ಟ (ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನದ) ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು

ಮನೆ, ಶಾಲಾ-ಕಾಲೇಜು, ಕಚೇರಿ, ಅಂಗನವಾಡಿ, ಅಂಗಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ಈಡಿಸ್ ಈಜಿಪ್ಟ್ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಡೆಂಘೀ ಜ್ವರದಿಂದ ರಕ್ಷಿಸಿಕೊಳ್ಳಲು ನೀಡುವ ಸಲಹೆ-ಸೂಚನೆಗಳನ್ನು ತಪ್ಪದೆ ಪಾಲಿಸಬೇಕು. ಅಲ್ಲದೆ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು. ಈ ಮೂಲಕ ಡೆಂಘೀ ಜ್ವರದ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎಸ್. ರೆಡ್ಡಿ, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಬಾಲಾಜಿ ಬಳಿಗಾರ ಹಾಗೂ ಕುಷ್ಟಗಿ ಪಟ್ಟಣದ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.