ಪ್ರಧಾನಿ ವಿರುದ್ಧ ತಂಗಡಗಿ ವಿವಾದಾತ್ಮಕ ಹೇಳಿಕೆ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

| Published : Mar 30 2024, 12:47 AM IST / Updated: Mar 30 2024, 12:48 AM IST

ಪ್ರಧಾನಿ ವಿರುದ್ಧ ತಂಗಡಗಿ ವಿವಾದಾತ್ಮಕ ಹೇಳಿಕೆ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವ ಶಿವರಾಜ ತಂಗಡಗಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕಪಡಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಚಿವ ಶಿವರಾಜ ತಂಗಡಗಿ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ, ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವ ಶಿವರಾಜ ತಂಗಡಗಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕಪಡಿಸಿದರು.ಈ ಸಂದರ್ಭ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ಶಿವರಾಜ್ ತಂಗಡಗಿ ಸಚಿವರಾಗಲು ಅನರ್ಹರು. ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದರೂ ಅಸಂಸ್ಕೃತಿ ಇರುವ ಸಚಿವರಾಗಿದ್ದಾರೆ. ಈ ರಾಷ್ಟ್ರದ ಹೆಮ್ಮೆಯ ಪ್ರಧಾನಿ ಮೋದಿ ಅವರ ಪರವಾಗಿ ಘೋಷಣೆಗಳನ್ನು ಮೊಳಗಿಸಿರುವ ನಮ್ಮ ಕಪಾಳಕ್ಕೆ ತಾಕತ್ತಿದ್ದರೆ ಹೊಡೆಯಿರಿ. ಅದಕ್ಕೆ ತಕ್ಕ ಪ್ರತಿಕ್ರಿಯೆನ್ನು ನೀಡುವುದಾಗಿ ತಿಳಿಸಿದರು. ಕಾಂಗ್ರೆಸ್ ಸಚಿವರು ಇದೇ ಚಾಳಿ ಮುಂದುವರಿಸಿದ್ದಲ್ಲಿ ಅವರು ಹೋದ ಕಡೆ ಎಲ್ಲ ಅವರಿಗೆ ಘೇರಾವ್ ಹಾಕಲಾಗುವುದುದೆಂದು ಎಚ್ಚರಿಕೆ ನೀಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಸಚಿವ ಶಿವರಾಜ ತಂಗಡಗಿ ಅವರ ಹೇಳಿಕೆ, ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಕಾಂಗ್ರೆಸ್‌ಗೆ ನಿರ್ಮಾಣವಾಗಿದೆ. ಇದನ್ನು ಅರಗಿಸಿಕೊಳ್ಳಲಾಗದೆ ಈ ರೀತಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಅರುಣ್‌ ಕುಮಾರ್, ಉಪಾಧ್ಯಕ್ಷರಾದ ಜಗದೀಶ್, ಮನು ಮಂಜುನಾಥ್, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಎಸ್‌ಸಿ ಘಟಕ ಅಧ್ಯಕ್ಷ ಪಿ.ಎಂ.ರವಿ, ನಗರಸಭಾ ಸದಸ್ಯರು ಸೇರಿದಂತೆ ಮತ್ತಿತರರು ಇದ್ದರು.