ಸಾರಾಂಶ
ಕಾರ್ಮಿಕರು ತ್ಯಾಗ ಬಲಿದಾನಗಳಿಂದ ಪಡೆದ ಹಕ್ಕುಗಳನ್ನು ಆಳುವ ಸರ್ಕಾರಗಳು ದಮನ ಮಾಡಲು ಹೊರಟಿವೆ.
ಹುಣಸೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಹುಣಸೂರು ಸಿಐಟಿಯು ಸೇರಿದಂತೆ ದೇಶದ 11 ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ದೇಶವ್ಯಾಪಿ ಮುಷ್ಕರದ ಮೇರೆಗೆ ಬುಧವಾರ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟಿಸಿತು. ಪಟ್ಟಣದ ಸಂವಿಧಾನ ವೃತ್ತದಲ್ಲಿ ಸಮಾವೇಶಗೊಂಡ ಸಿಐಟಿಯು ಸದಸ್ಯರು, ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ವಿಮಾ ಪ್ರತಿನಿಧಿಗಳ ಸಂಘದ ಸದಸ್ಯರು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕಾರ್ಮಿಕ ವಿರೋಧಿ ನೀತಿಗಳು ವಾಪಸ್ಸಾಗಲಿ, ಕಾರ್ಮಿಕರ ಬೇಡಿಕೆಗಳು ಈಡೇರಲಿ, ಕಾರ್ಮಿಕರ ಕಾನೂನಿಗೆ ತಿದ್ದುಪಡಿ ಬೇಡವೇ ಬೇಡ ಎಂದು ಘೋಷಣೆ ಕೂಗಿದರು. ನಂತರ ಅಂಚೆ ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರನ್ನು ಉದ್ದೇಶಿಸಿ ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಬಸವರಾಜು ಮಾತನಾಡಿ, ಕಾರ್ಮಿಕರು ತ್ಯಾಗ ಬಲಿದಾನಗಳಿಂದ ಪಡೆದ ಹಕ್ಕುಗಳನ್ನು ಆಳುವ ಸರ್ಕಾರಗಳು ದಮನ ಮಾಡಲು ಹೊರಟಿವೆ. ಕಾರ್ಮಿಕರು ಹೋರಾಟಕ್ಕೆ ಸಜ್ಜಾಗಬೇಕು. ಎಲ್ಲಾ ವಲಯದಲ್ಲೂ ಕಾರ್ಮಿಕರಿಗೆ ಭದ್ರತೆ ಮತ್ತು ಕನಿಷ್ಠ ವೇತನ ಇಲ್ಲದೆ ಧೃಡ ಪರಿಸ್ಥಿತಿ ನಿರ್ಮಾಣವಾಗಿದ್ದು. ಇದರಿಂದ ಕಾರ್ಮಿಕರ ಶ್ರಮಕ್ಕೆ ಬೆಲೆ ಇಲ್ಲದಂತಾಗಿದೆ. ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಭಾಗವಾಗಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಸಿಐಟಿಯು ತಾಲೂಕು ಸಂಚಾಲಕ ವಿ. ಬಸವರಾಜು ಕಲ್ಕುಣಿಕೆ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಪುಷ್ಪಲತಾ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಮಂಜುಳ, ವಿಮಾ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಕೆ. ಸ್ವಾಮಿ, ಜಗದೀಶ್, ಅಂಗನವಾಡಿ ನೌಕರ ಸಂಘದ ತಾಲೂಕ ಅಧ್ಯಕ್ಷ ಮಂಗಳ ಗೌರಮ್ಮ. ಪ್ರತಿಭಾ. ಶೋಭಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಚಿಕ್ಕಣ್ಣಗೌಡ, ತಾಲೂಕ ಅಧ್ಯಕ್ಷ ಎಂ.ಎಸ್. ಚಂದ್ರಶೇಖರ್, ಗ್ರಾಪಂ ನೌಕರ ಸಂಘದ ಲೋಕೇಶ್, ದಿನೇಶ್, ರವಿಕುಮಾರ್, ವಿಮಾ ಪ್ರತಿನಿಧಿಗಳ ಸಂಘದ ಅಧ್ಯಕ್ಷ ಸ್ವಾಮಿ ಕಾರ್ಯದರ್ಶಿ ಸಿದ್ದಯ್ಯ, ರಾಧಾಕೃಷ್ಣ ಮೋದೂರು ಮಹೇಶ್, ನಂಜೇಗೌಡ, ಬಿಸಿಯೂಟ ನೌಕರರ ಸಂಘದ ಶೋಭಾ, ಹೇಮಾ, ಶಿವಮ್ಮ. ದಸಂಸ ರಾಮಕೃಷ್ಣ ಅತ್ತಿಕುಪ್ಪೆ, ಸಿದ್ದೇಶ್, ರಾಜು ಚಿಕ್ಕಹುಣಸೂರು, ಕೆಪಿಆರ್‌ಎಸ್‌ನ ಗೋಪಾಲ್, ಜಾನಕಮ್ಮ ಮತ್ತು ಕಾರ್ಮಿಕರು ಭಾಗವಹಿಸಿದ್ದರು.