ಕನಕಗಿರಿ ಉತ್ಸವದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ

| Published : Mar 01 2024, 02:23 AM IST

ಸಾರಾಂಶ

ಮಾ.೨, ೩ರಂದು ಕನಕಗಿರಿ ಉತ್ಸವ ನಡೆಯಲಿದೆ. ಮುಖ್ಯಮಂತ್ರಿ ಸಿದ್ರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.

ಕಾರಟಗಿ: ಎರಡು ದಿನಗಳ ಕಾಲ ನಡೆಯುವ ಕನಕಗಿರಿ ಉತ್ಸವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವೂ ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ಉತ್ಸವದಲ್ಲಿ ಪಾಲ್ಗೊಳ್ಳಲು ವ್ಯವಸ್ಥೆ ಮಾಡುವಂತೆ ತಹಸೀಲ್ದಾರ್ ಎಂ.ಕುಮಾರಸ್ವಾಮಿ ಹೇಳಿದರು.ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭಿವಿಗಳ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಾ.೨, ೩ರಂದು ಕನಕಗಿರಿ ಉತ್ಸವ ನಡೆಯಲಿದೆ. ಮುಖ್ಯಮಂತ್ರಿ ಸಿದ್ರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸರ್ಕಾರ ಐದು ಗ್ಯಾರಂಟಿಗಳನ್ನು ಈಗಾಗಲೇ ರಾಜ್ಯದಲ್ಲಿ ಜಾರಿಗೆ ತಂದಿದ್ದು, ಕ್ಷೇತ್ರದಲ್ಲಿನ ಯೋಜನೆಗಳ ಫಲಾನುಭವಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದರು.ಪ್ರತಿ ವಾರ್ಡ್‌ನ ಅಂಗನವಾಡಿ ಮೇಲ್ವಿಚಾರಕರು ಮತ್ತು ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿ ಮಾಡಿ ಅವರನ್ನು ಕರೆತರಬೇಕೆಂದು ಅವರು ಹೇಳಿದರು.ಫಲಾನುಭವಿಗಳನ್ನು ಕರೆದೊಯ್ಯಯಲು ತಾಲೂಕಿನಿಂದ ೨೦ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಸಮರ್ಪಕವಗಿ ಅನುಷ್ಠಾನ ಮಾಡಲಾಗಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ, ಜೆಸ್ಕಾಂ, ಎಂಜಿನಿಯರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಅಹಾರ ಇಲಾಖೆ, ಸೇರಿದಂತೆ ಕನಕಗಿರಿ,ಕಾರಟಗಿ ಶಿರಸ್ತೇದಾರರು, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಪಟ್ಟಣದ ಎಲ್ಲ ಅಂಗನವಾಡಿ ಮೇಲ್ವಿಚಾರಕರು ಮತ್ತು ಕಾರ್ಯಕರ್ತರು ಇದ್ದರು.