ನಗರದ ಬದುಕು ಸಾಂತ್ವನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಇಂದಿರಾನಗರದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟಲ್‌ನಲ್ಲಿ ಬದುಕಿಗೊಂದು ಒಳ್ಳೆ ಮಾತು ಸಲಹೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ತಿಪಟೂರು

ನಗರದ ಬದುಕು ಸಾಂತ್ವನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಇಂದಿರಾನಗರದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟಲ್‌ನಲ್ಲಿ ಬದುಕಿಗೊಂದು ಒಳ್ಳೆ ಮಾತು ಸಲಹೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾ ಟನೆ ಮಾಡಿದ ನಗರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‌ಸ್ಪೆಕ್ಟರ ರವಿಕುಮಾರ್ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಅಗತ್ಯ ಕಾನೂನು ಅರಿವು ವಿಚಾರ ವಿನಿಮಯ ಮಾಡಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬದುಕು ಸಾಂತ್ವನ ಕೇಂದ್ರದ ಮುಖ್ಯಸ್ಥರಾದ ಬಿ.ಎಸ್. ನಂದಕುಮಾರ್ ವಿದ್ಯಾರ್ಥಿಗಳೊಂದಿಗೆ ಸಾಂತ್ವನ ಯೋಜನೆ, ಇಲಾಖೆಯ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೇಲ್ವೀಚಾರಕರಾದ ಸುಮಂಗಲಿ ಬಾದಾಮಿ, ತಾಲೂಕು ವಿಸ್ತರಾಣಾಧಿಕಾರಿ ಜಲಾಜಾಕ್ಷಿ , ನಾಗವೇಣಿ, ಅನು ಆಗಸ್ಟೇನ್, ವೀಣಾ ಅಶೋಕ್, ಸುಮಲತಾ ಇದ್ದರು.