ಸಾರಾಂಶ
ಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಘಟನೆ ಮರುಕಳಿಸಿದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಗ್ರೇಡ್–2 ತಹಸೀಲ್ದಾರ್ ಕುಮಾರ್‌ಗೆ ಮನವಿ ಸಲ್ಲಿಸಿದರು.
ಕೊಳ್ಳೇಗಾಲ: ಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಘಟನೆ ಮರುಕಳಿಸಿದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಗ್ರೇಡ್–2 ತಹಸೀಲ್ದಾರ್ ಕುಮಾರ್‌ಗೆ ಮನವಿ ಸಲ್ಲಿಸಿದರು.ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆಯೊಂದಿಗೆ ಮೆರವಣಿಗೆ ನಡೆಸಿದರು.
ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಶಬ್ಬೀರ್ ಪಾಷ ಮಾತನಾಡಿ, ದೇಶದಲ್ಲಿ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯವು ಅತ್ಯಂತ ವಿಷಾಧನೀಯವಾಗಿದೆ. ಮೈಸೂರಿನ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗೆ ತಕ್ಷಣವೇ ಕಠಿಣ ಶಿಕ್ಷೆ ನೀಡಬೇಕಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ವ್ಯವಸ್ಥೆ ಬಲಪಡಿಸಬೇಕು , ಇಂತಹ ಕೖತ್ಯಗಳಲ್ಲಿ ಪಾಲ್ಗೊಂಡ ಆರೋಪಿಗಳಿಗೆ ತಕ್ಕ ಶಾಸ್ತಿಯಾಗುವ ಜೊತೆಗೆ ಮುಂದೆ ಇಂತಹ ಘಟನೆ ನಡೆಯದಂತೆ ಕಡಿವಾಣ ಹಾಕುವ ಅವಶ್ಯವಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಕುಮಾರ್ ತಾಲ್ಲೂಕು ಅಧ್ಯಕ್ಷ ಅಜ್ಗರ್ ಪಾಷ, ಉಪಾಧ್ಯಕ್ಷ ವಜಾಹತ್, ಜಿಲ್ಲಾ ಕಾರ್ಯದರ್ಶಿ ಮುಬಾರಕ್ ಅಹಮ್ಮದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಭಾಗ್ಯ, ಕಾರ್ಯದರ್ಶಿ ರಾಧ, ಪ್ರಧಾನ ಕಾರ್ಯದರ್ಶಿ ನಾಗವೇಣಿ, ಮಹಿಳಾ ಮುಖ್ಯಸ್ಥೆ ಶೋಭ.. ಪ್ರಸಾದ್, ಸುದೀಪ್, ಇಮ್ರಾನ್ ಪಾಷ, ರೋಷನ್ ಇನ್ನಿತರಿದ್ದರು.