ಸಾರಾಂಶ
ಕೇಂದ್ರ ಸರ್ಕಾರ ಯೋಜನೆಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಯೋಜನೆಯಿಂದ ಹೊರಗಿರುವ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸ ಮಾಡಲು ಸೂಚಿಸಿದರು.
ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಯೋಜನೆಗಳ ಪ್ರಯೋಜನ ಪಡೆದು ಅರ್ಥಿಕವಾಗಿ ಸಬಲರಾಗುವಂತೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಕರೆ ನೀಡಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಉದ್ಘಾಟಿಸಿ ಸಂಸದ ಮಾತನಾಡಿ, ಈ ಯೋಜನೆಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಯೋಜನೆಯಿಂದ ಹೊರಗಿರುವ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸ ಮಾಡಲು ಸೂಚಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ, ಪಾಲಿಕೆಯ ಉಪಮಹಾಪೌರರಾದ ಯಶೋಧ ಯಗ್ಗಪ್ಪ, ಪಾಲಿಕೆ ಸದಸ್ಯರಾದ ಜೆ.ಎನ್. ಶ್ರೀನಿವಾಸ್, ಸುರೇಶ್ ಗಂಡುಗಾಳೆ, ದಾವಣಗೆರೆ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜಯ್ಯ ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ ಸೇರಿ ಇತರರಿದ್ದರು.
.....