ಚಿಕ್ಕಮಗಳೂರುಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮೊದಲಾದ ವಿಚಾರಗಳು ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಡುವ ಸುಳ್ಳು ಮಾಹಿತಿಗೆ ಕಿವಿಗೊಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೂಚಿಸಿದರು.
ಮಾ.18 ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪರೀಕ್ಷೆ -1ರ ಪೂರ್ವ ಸಿದ್ಧತಾ ಸಭೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮೊದಲಾದ ವಿಚಾರಗಳು ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಡುವ ಸುಳ್ಳು ಮಾಹಿತಿಗೆ ಕಿವಿಗೊಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೂಚಿಸಿದರು.
ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ.18 ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪರೀಕ್ಷೆ -1ರ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ ಶಿಕ್ಷಕರು ಪ್ರಶ್ನೆ ಪತ್ರಿಕೆ ಅಪಪ್ರಚಾರದಿಂದ ದೂರ ಇರಲು ಬೇಕಾದ ಮನಸ್ಥಿತಿ ಮಕ್ಕಳಲ್ಲಿ ಬೆಳೆಸಬೇಕು. ಪರಿಶೀಲನೆ ಮಾಡುವಾಗ ಅತ್ಯಂತ ಸರಳ ಸ್ವಭಾವದಿಂದ ಮಾಡಬೇಕು. ಬಾಲಕಿಯರ ಪರಿಶೀಲನೆಗೆ ಕಡ್ಡಾಯವಾಗಿ ಮಹಿಳಾ ಶಿಕ್ಷಕಿಯರು ಮಾಡಬೇಕು ಎಂದರು.ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿ ಅಗತ್ಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಿ ಇದರ ವೀಕ್ಷಣೆಗೆ ನಿಯಂತ್ರಣ ಕೊಠಡಿ ಮೂಲಕ ವೆಬ್ ಕಾಸ್ಟಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಪರೀಕ್ಷೆ ದಿನ ನಿರಂತರ ವಿದ್ಯುತ್ ಸರಬರಾಜಿಗೆ ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಈ ಪ್ರಸಕ್ತ ವರ್ಷ ಪರೀಕ್ಷೆ ಬರೆಯುವ ಪ್ರತಿ ವಿದ್ಯಾರ್ಥಿಗೂ ಪರೀಕ್ಷೆ ಬರೆಯುವ ಕೇಂದ್ರದ ಬಗ್ಗೆ ಶಾಲಾ ಮುಖ್ಯಶಿಕ್ಷಕರು ಮತ್ತು ಸಹ ಶಿಕ್ಷಕರಿಂದ ಮಾಹಿತಿ ಒದಗಿಸಲು ತಿಳಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಉತ್ತಮ ಶೌಚಾಲಯ, ಆಸನ ಹಾಗೂ ಕೊಠಡಿಗೆ ಗಾಳಿ-ಬೆಳಕಿನ ವ್ಯವಸ್ಥೆ ಸೇರಿ ಅಗತ್ಯ ಮೂಲ ಸೌಲಭ್ಯಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ಕೇಂದ್ರದೊಳಗೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿ ಕಡ್ಡಾಯವಾಗಿ ಪ್ರವೇಶಿಸುವಂತಿಲ್ಲ. ಮೊಬೈಲ್ ಸೇರಿ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ನಕಲು ತಡೆಯಲು ಜೆರಾಕ್ಸ್ ಅಂಗಡಿ ಮುಚ್ಚುವಂತೆ ತಿಳಿಸಿದರು.ವಿದ್ಯಾರ್ಥಿಗಳಿಗೆ ಫ್ರೀ ಬಸ್
ಗ್ರಾಮೀಣ ಪ್ರದೇಶದಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಅರ್ಧಗಂಟೆ ಮುಂಚಿತ ವಾಗಿ ತಲುಪಬೇಕು. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆ ಬರೆಯುವಂತೆ ಹೇಳಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್, ಡಯಟ್ ಪ್ರಾಂಶುಪಾಲ ಸುಂದರೇಶ್, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಡಲ್ ಅಧಿಕಾರಿಯಾಗಿ ನೇಮಕವಾದ ದಯಾವತಿ, ಉಪನಿರ್ದೇಶಕ ತಿಮ್ಮರಾಜು ಹಾಗೂ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಇದ್ದರು.
---ಬಾಕ್ಸ್---ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಹಾಗೂ ವಿದ್ಯಾರ್ಥಿಗಳ ವಿವರ
ತಾಲೂಕುಪರೀಕ್ಷಾ ಕೇಂದ್ರ ಸಂಖ್ಯೆವಿದ್ಯಾರ್ಥಿ ಸಂಖ್ಯೆಬೀರೂರು61252
ಚಿಕ್ಕಮಗಳೂರು113754ಕಡೂರು102672
ಕೊಪ್ಪ41044ಮೂಡಿಗೆರೆ51394
ನರಸಿಂಹರಾಜಪುರ4916ಶೃಂಗೇರಿ2555
ತರೀಕೆರೆ101970ಒಟ್ಟು5213,557ಅಂಕಿ ಅಂಶ
ಹೊಸ ವಿದ್ಯಾರ್ಥಿ :12,829ಪುನರಾವರ್ತಿತ 728