ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮತದಾರರ ಮನವೊಲಿಸಿ: ಸಚಿವ ಚಲುವರಾಯಸ್ವಾಮಿ

| Published : Apr 09 2024, 12:50 AM IST

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮತದಾರರ ಮನವೊಲಿಸಿ: ಸಚಿವ ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ನಾಗಮಂಗಲ ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಿಟ್ಟು ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಸಂಕಲ್ಪದೊಂದಿಗೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮತದಾರರ ಮನವೊಲಿಸುವ ಕೆಲಸ ಮಾಡಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಸ್ವಾಭಿಮಾನ ಮತ್ತು ಗೌರವವನ್ನು ಉಳಿಸುವುದು ನಿಮ್ಮ ಕೈಲಿದೆ ಎಂದರು.

ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾಲೂಕು ಮತ್ತು ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಕಾರ್ಯಗಳು ನಡೆಯುತ್ತಿವೆ. ಕಾಂಗ್ರೆಸ್ ಯಾವುದೇ ಒಂದು ಜಾತಿ ವರ್ಗಕ್ಕೆ ಸೀಮಿತವಾಗಿಲ್ಲ. ಎಲ್ಲ ಸಮುದಾಯದ ಬಡಜನರಿಗೆ ಉತ್ತಮ ಬದುಕು ಕಟ್ಟಿಕೊಡುವ ಪಕ್ಷವಾಗಿದೆ ಎಂದರು.

ನಮ್ಮ ಸರ್ಕಾರದ ಯೋಜನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಟ್ಟು ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಗೆಲುವಿಗೆ ಪೂರಕವಾಗಿ ಹಗಲಿರುಳು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಹಿರಿಯ ಮಖಂಡ ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ಸೇರಿದಂತೆ ಹಲವರಿದ್ದರು.