ಸಿಎಂಆರ್‌ ವಿವಿಯ ಘಟಿಕೋತ್ಸವ: 64 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

| Published : Feb 15 2024, 01:32 AM IST

ಸಾರಾಂಶ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ ಧ್ವನಿ ಸಭಾಂಗಣದಲ್ಲಿ ನಡೆದ ಸಿಎಂಆರ್ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ನಿರ್ದೇಕ, ಪದ್ಮಭೂಷಣ ಪ್ರೊ.ಪಿ. ಬಲರಾಮ್ ಅವರು 64 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ ಧ್ವನಿ ಸಭಾಂಗಣದಲ್ಲಿ ನಡೆದ ಸಿಎಂಆರ್ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ನಿರ್ದೇಕ, ಪದ್ಮಭೂಷಣ ಪ್ರೊ.ಪಿ. ಬಲರಾಮ್ ಅವರು 64 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿದರು.

ಬಳಿಕ ಮಾತನಾಡಿದ ಅವರು, ಪ್ರಕೃತಿ ಮಾನವನ ಬಹುದೊಡ್ಡ ಶಕ್ತಿ. ವಿದ್ಯಾರ್ಥಿಗಳು ಓದಿನ ಜೊತೆಗೆ ಪರಿಸರದ ಕಾಳಜಿಯನ್ನು ಬದುಕಾಗಿಸಿಕೊಳ್ಳಬೇಕು. ಆ ಮೂಲಕ ತಮ್ಮ ಕಲಿಕೆಯ ಮೌಲ್ಯವನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು ಎಂದರು.

ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಸಿಎಂಆರ್ ವಿಶ್ವವಿದ್ಯಾಲಯ ಅಧ್ಯಕ್ಷ, ರಾಜ್ಯಸಭಾ ಮಾಜಿ ಸದಸ್ಯ ಡಾ। ಕೆ.ಸಿ.ರಾಮಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಕಲಿತ ಮೌಲ್ಯವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಶಿಕ್ಷಣಕ್ಕೆ ಮಹತ್ವ ಬರುತ್ತದೆ ಹಾಗೂ ಸಮಾಜಕ್ಕೆ ಸಂಪನ್ಮೂಲ ವ್ಯಕ್ತಿಗಳಾಗುತ್ತಾರೆ ಎಂದರು.

2022-23ನೇ ಸಾಲಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಕುಲಾಧಿಪತಿ ಡಾ.ಸಬಿತಾ ರಾಮಮೂರ್ತಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಿದರು.

ಈ ವೇಳೆ ವೇದ ಮತ್ತು ಶಾಸ್ತ್ರ ಅಧ್ಯಯನ ಕ್ಷೇತ್ರದ ಅಪಾರ ಸಾಧನೆಗಾಗಿ ಫ್ಯಾಮಿಲಿ ಬಿಜಿನೆಸ್ ರಿಸರ್ಚ್ ಇಂಟರ್ ನ್ಯಾಷನಲ್ ಸೆಂಟರ್ (ಫ್ಯಾಬ್ರಿಕ್) ಸಂಸ್ಥೆಯ ಅಧ್ಯಕ್ಷ ತತ್ವಮಸಿ ದೀಕ್ಷಿತ್ ಅವರಿಗೆ ಸಿಎಂಆರ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿತು.

ಇಸ್ರೋ ಮಾಜಿ ಅಧ್ಯಕ್ಷ ಪ್ರೊ.ಆರ್.ಎಂ.ವಾಸಗಂ, ಸಿಎಂಆರ್‌ ಆಡಳಿತ ಮಂಡಳಿ ಸದಸ್ಯ ಡಾ। ಎಚ್.ಎ.ರಂಗನಾಥ್, ಡಾ। ಜಿ.ಪಾರ್ಥಸಾರಥಿ, ಡಾ। ಆರ್.ಮೋಹನ್ ದಾಸ್, ಸಿಎಂಆ‌ರ್ ವಿಶ್ವವಿದ್ಯಾಲಯದ ಚಾನ್ಸಲರ್ ಜಯದೀಪ್ ಕೆ.ಆರ್.ರೆಡ್ಡಿ, ಜ್ಞಾನಧಾರ ಟ್ರಸ್ಟ್ ಕಾರ್ಯದರ್ಶಿ ಕೆ.ಸಿ.ಜಗನ್ನಾಥ ರೆಡ್ಡಿ ಪಾಲ್ಗೊಂಡಿದ್ದರು.