ದಾಂಡೇಲಪ್ಪ ದೇವಸ್ಥಾನ ಆಡಳಿತ ಸಮಿತಿ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಗುರುದತ್ತ ವಿಠೋಬಾ ಮಿರಾಶಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಜಾತ್ರೋತ್ಸವಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಜಾತ್ರೋತ್ಸವದ ಯಶಸ್ಸಿಗೆ ಭಕ್ತಾದಿಗಳು ಸಹಕರಿಸಬೇಕು ಎಂದರು.
ದಾಂಡೇಲಿ: ದಾಂಡೇಲಪ್ಪ ದೇವರ ಜಾತ್ರಾ ಮಹೋತ್ಸವ ಅ. 20ರಂದು ನಡೆಯುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಶಿವಾನಂದ ನಾವದಗಿ ಅವರು ಮಾತನಾಡಿ, ದಾಂಡೇಲಪ್ಪ ಜಾತ್ರೆ ಎಲ್ಲರ ಉತ್ಸವವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಲು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಜಾತ್ರೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ನೀಡಲಿದೆ ಎಂದರು.
ದಾಂಡೇಲಪ್ಪ ದೇವಸ್ಥಾನ ಆಡಳಿತ ಸಮಿತಿ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಗುರುದತ್ತ ವಿಠೋಬಾ ಮಿರಾಶಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಜಾತ್ರೋತ್ಸವಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಜಾತ್ರೋತ್ಸವದ ಯಶಸ್ಸಿಗೆ ಭಕ್ತಾದಿಗಳು ಸಹಕರಿಸಬೇಕು ಎಂದರು.ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ಮಾತನಾಡಿ, ಜಾತ್ರೋತ್ಸವಕ್ಕೆ ಕಾಗದ ಕಾರ್ಖಾನೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.ಸಿಪಿಐ ಶಿವಾನಂದ ಅಂಬಿಗೇರ ಮಾತನಾಡಿ, ಜಾತ್ರೋತ್ಸವ ಶಾಂತಿಯುತವಾಗಿ ನಡೆಯಲು ಹಾಗೂ ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಇಲಾಖೆಗಳ ಸಹಕಾರ ಪಡೆದು ಶಾಂತಿಯುತ ಜಾತ್ರೋತ್ಸವಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಲಾಗುತ್ತದೆ. ಜಾತ್ರೆ ದಿನ ಸುಗಮ ವಾಹನ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಶೈಲೇಶ ಪರಮಾನಂದ ಮಾತನಾಡಿ, ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಜಾತ್ರೋತ್ಸವದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೀಪಕ ನಾಯಕ ಮತ್ತು ದಾಂಡೇಲಿ ವಲಯ ಅರಣ್ಯಾಧಿಕಾರಿ ಗುರುಪ್ರಸಾದ ಮಾತನಾಡಿದರು.ಸಭೆಯಲ್ಲಿ ಗಣ್ಯರು, ಜಾತ್ರೋತ್ಸವ ಸಮಿತಿ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘ- ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು. ನಗರ ಠಾಣೆಯ ಪಿಎಸ್ಐ ಅಮೀನ್ ಅತ್ತಾರ ಸ್ವಾಗತಿಸಿ, ವಂದಿಸಿದರು.