18 ವರ್ಷ ವಯಸ್ಸು ಪೂರ್ಣಗೊಳಿಸಿದ ಯುವ ಮತದಾರರು ಈ ಅಭಿಯಾನದ ಪ್ರಯೋಜನ ಪಡೆದು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.
ಧಾರವಾಡ:
ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಯಶಸ್ವಿಯಾಗಿ ಸಾಗುತ್ತಿದ್ದು, ರಾಜ್ಯದಲ್ಲಿ ಸುಮಾರು ಐದೂವರೆ ಕೋಟಿ ಮತದಾರರ ಪೈಕಿ ಮೂರುವರೆ ಕೋಟಿ ಮತದಾರರ ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ ಎಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಹೇಳಿದರು.ಇಲ್ಲಿಯ ಕರ್ನಾಟಕ ಕಾಲೇಜು ಆವರಣದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ನಡೆದ ಸುಮಾರು 500 ವಿದ್ಯಾರ್ಥಿಗಳಿಂದ ಮಾನವ ಸರಪಳಿ (ಸ್ವೀಪ್ ಚಟುವಟಿಕೆ) ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ರಾಜ್ಯದ 59 ಸಾವಿರ ಬೂತ್ ಮಟ್ಟದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.
18 ವರ್ಷ ವಯಸ್ಸು ಪೂರ್ಣಗೊಳಿಸಿದ ಯುವ ಮತದಾರರು ಈ ಅಭಿಯಾನದ ಪ್ರಯೋಜನ ಪಡೆದು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಸಹಕರಿಸಬೇಕೆಂದರು.ಜಿಲ್ಲಾಧಿಕಾರಿ ಸ್ನೇಹಲ್.ಆರ್., ಜಿಪಂ ಸಿಇಒ ಭುವನೇಶ ಪಾಟೀಲ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್. ಘಾಳಿ, ನಗರಾಭಿವೃದ್ಧಿ ಕೋಶದ ಅಜೀಜ್ ದೇಸಾಯಿ, ಜಿಪಂ ಬಿ.ಎಸ್. ರಾಠೋಡ, ಮತಗಟ್ಟೆ ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಯಗಳ ಅಧಿಕಾರಿಗಳು, ಶಾಲಾ-ಕಾಲೇಜು ಶಿಕ್ಷಕರು ಇದ್ದರು. ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಎಸ್. ಎಂ ಹಡೇದಮನಿ ನಿರೂಪಿಸಿದರು.