ಸಾರಾಂಶ
ಕನ್ನಡಪ್ರಭ ವಾರ್ತೆ, ಅಜ್ಜಂಪುರಕ್ಷೇತ್ರದಲ್ಲಿ ವಾಲ್ಮೀಕಿ ಭವನ ಕಾಮಗಾರಿ ಪೂರ್ಣಗೊಳಿಸಲು ಹಾಗೂ ವಾಲ್ಮೀಕಿ ಸಮಾಜವಿರುವ ಗ್ರಾಮಗಳಲ್ಲಿ ಹೊಸ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು.ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಭರವಸೆ ನೀಡಿದರು.
ಪಟ್ಟಣದಲ್ಲಿ ತಾಲೂಕು ಆಡಳಿತ ತಾಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಸಂಯುಕ್ತವಾಗಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ ಮಾತನಾಡಿ ತರೀಕೆರೆಯಲ್ಲಿ ಆಳ್ವಿಕೆ ನಡೆಸಿದ ಪಾಳೇಗಾರ ಸರ್ಜಾ ಹನುಮಪ್ಪ ನಾಯಕ ಅವರ ಪುತ್ಥಳಿ ನಿರ್ಮಿಸಲಾಗುವುದು ಎಂದು ಹೇಳಿದರು.ಮಹರ್ಷಿ ವಾಲ್ಮೀಕಿ ರಾಮಾಯಣ ಕೃತಿಯಲ್ಲಿ ರಾಮ ರಾಜ್ಯದ ಪರಿಕಲ್ಪನೆ ಆದರ್ಶ ಆಳ್ವಿಕೆ ಇಂದಿನ ಆಡಳಿತ ವ್ಯವಸ್ಥೆಗೆ ದಾರಿದೀಪವಾಗಿದೆ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ರೇವಣ್ಣ ಅಭಿಪ್ರಾಯ ಪಟ್ಟರು.ತರೀಕೆರೆ ತಹಸೀಲ್ದಾರ್ ವಿಶ್ವಜಿತ್ ಮೆಹ್ತಾ, ಅಜ್ಜಂಪುರ ತಹಸೀಲ್ದಾರ್ ವಿನಾಯಕ ಸಾಗರ್ , ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ವಾಲ್ಮೀಕಿ ಸಮಾಜ ಜಿಲ್ಲಾಧ್ಯಕ್ಷ ಭೀಮಪ್ಪ, ತರೀಕೆರೆ ಘಟಕ ಅಧ್ಯಕ್ಷ ಗೋವಿಂದಪ್ಪ, ಅಜ್ಜಂಪುರ ತಾಲೂಕು ಅಧ್ಯಕ್ಷ ಗಂಗಾಧರ್, ತರೀಕೆರೆ ಪುರಸಭೆ ಅಧ್ಯಕ್ಷ ವಸಂತ್ ಕುಮಾರ್, ಪಪಂ ಉಪಾಧ್ಯಕ್ಷ ಕವಿತಾ ಕೇಶವಮೂರ್ತಿ ಮಾತನಾಡಿದರು.ತಾಲುಕು ಪಂಚಾಯಿತಿ ಇಒ ವಿಜಯಕುಮಾರ್ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಯೋಗೇಶ್ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರಮೇಶ್, ಮುಖಂಡ ಕೃಷ್ಣಪ್ಪ, ಶಿಕ್ಷಕ ಜಿ.ಆರ್. ಮಂಜುನಾಥ್, ಶೃತಿ, ನಿವೃತ್ತ ಶಿಕ್ಷಕಿ ಯಶೋದಮ್ಮ, ಸದಸ್ಯ ನಿಸಾರ್ ಅಹಮದ್ , ಸುಮಲತಾ, ವರ್ಮಾ ಪ್ರಕಾಶ್ ಹಾಜರಿದ್ದರು.
ಮಹರ್ಷಿ ವಾಲ್ಮೀಕಿ ಕುರಿತು ಮಾರುತೇಶ್ ಸುಜಾತಾ ಉಪನ್ಯಾಸ ನೀಡಿದರು. ಅಂಕ ಪಡೆದ ಸಮಾಜದ ಮಕ್ಕಳಿಗೆ ಸನ್ಮಾನಿಸಲಾಯಿತು. ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಿತು.