ಸಾರಾಂಶ
ತಾಲೂಕಿನಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಸಹಕಾರ ಪಡೆಯಲಾಗುವುದು ಎಂದು ಜಿಲ್ಲಾ ಧಾರ್ಮಿಕ ಪರಿಷತ್ ತಾಲೂಕು ನಿರ್ದೇಶಕ ಗೊಂದಿಹಳ್ಳಿ ರಂಗರಾಜು ತಿಳಿಸಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ತಾಲೂಕಿನಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಸಹಕಾರ ಪಡೆಯಲಾಗುವುದು ಎಂದು ಜಿಲ್ಲಾ ಧಾರ್ಮಿಕ ಪರಿಷತ್ ತಾಲೂಕು ನಿರ್ದೇಶಕ ಗೊಂದಿಹಳ್ಳಿ ರಂಗರಾಜು ತಿಳಿಸಿದರು. ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಸಿದ್ಧರಬೆಟ್ಟದ ಶ್ರೀ ಸಿದ್ಧೇಶ್ವರ ಸ್ವಾಮಿಗೆ ಜಿಲ್ಲಾ ಧಾರ್ಮಿಕ ಪರಿಷತ್ ತಾಲೂಕು ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆ ಕಾರ್ಯಕರ್ತರೊಂದಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರ ಆಶೀರ್ವಾದದಿಂದ ಜಿಲ್ಲಾ ಧಾರ್ಮಿಕ ಪರಿಷತ್ ತಾಲೂಕು ನಿರ್ದೇಶಕನಾಗಿ ಆಯ್ಕೆಯಾಗಿದ್ದೇನೆ. ಈ ಪರಿಷತ್‌ನಲ್ಲಿ ಜಿಲ್ಲೆಯಿಂದ ೮ ಜನ ನಾಮ ನಿರ್ದೇಶನರಾಗಿದ್ದು ಮಾನ್ಯ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು ಮುಜರಾಯಿ ತಹಸೀಲ್ದಾರ್ ಪದನಿಮಿತ್ತ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ತಿಳಿಸಿದರು. ಸರ್ಕಾರ ಮತ್ತು ಧಾರ್ಮಿಕ ಇಲಾಖೆಯಿಂದ ಬರುವ ಅನುದಾನದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳ ಸಮಸ್ಯೆಗಳ ಬಗ್ಗೆ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ದೇವಸ್ಥಾನಗಳ ಅಭಿವೃದ್ದಿಗೆ ಶ್ರಮಿಸಲಾಗುವುದು ಈ ನಿಟ್ಟಿನಲ್ಲಿ ಎಲ್ಲರ ಸಹಕಾರವನ್ನು ಪಡೆದುಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ನಾಗಣ್ಣ ಬೂದಗವಿ ಗ್ರಾಪಂ ಅಧ್ಯಕ್ಷೆ ಕವಿತಾ, ರಮೇಶ್, ಮಾಜಿ ಅಧ್ಯಕ್ಷೆ ಲಕ್ಷ್ಮೀ ಸದಸ್ಯರಾದ ಅಖಂಡಾರಾದ್ಯ, ರವಿಕುಮಾರ್, ಗೋವಿಂದರಾಜು, ಅರವಿಂದ್, ಜಯಮ್ಮ, ಜ್ಯೋತಿಸ್ವಾಮಿ, ಮುಖಂಡರುಗಳಾದ ಪುಟ್ಟನರಸಪ್ಪ, ರಂಗನಾಥ್, ಧನಂಜಯ್, ನಾಗರಾಜು, ರಮೇಶ್, ಲಕ್ಷಮ್ಮ, ಜಯಲಕ್ಷ್ಮೀ, ಲಕ್ಷ್ಮೀ ಸೇರಿದಂತೆ ಇತರರು ಹಾಜರಿದ್ದರು.