ಸಾರಾಂಶ
ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರದ ಮಹಿಳೆಯೊಬ್ಬರಿಗೆ ಮುಖ್ಯಮಂತ್ರಿ ಕಚೇರಿಯ ಮಧ್ಯಪ್ರವೇಶದಿಂದಾಗಿ ಉಚಿತವಾಗಿ ಶೀಘ್ರದಲ್ಲೇ ಔಷಧಿ ತಲುಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರದ ಮಹಿಳೆಯೊಬ್ಬರಿಗೆ ಮುಖ್ಯಮಂತ್ರಿ ಕಚೇರಿಯ ಮಧ್ಯಪ್ರವೇಶದಿಂದಾಗಿ ಉಚಿತವಾಗಿ ಶೀಘ್ರದಲ್ಲೇ ಔಷಧಿ ತಲುಪಿಸಲಾಗಿದೆ.ಅನಾಪೈಲಾಕ್ಸಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಪುರುಷೋತ್ತಮ ನಾವೂರು ಪತ್ನಿ ಚಾಂದಿನಿ ಎಂಬುವರು ಈ ಹಿಂದೆ ಹೈದರಾಬಾದ್‌ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದು, ಚಿಕಿತ್ಸಗೆ ಲಕ್ಷಾಂತರ ರು. ವೆಚ್ಚ ಮಾಡಿದ್ದರು. ಸದ್ಯ ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹಣ ಭರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಸೂಕ್ತ ಸಹಾಯ ನೀಡಬೇಕು ಎಂದು ಮುಖ್ಯಮಂತ್ರಿ ಕಚೇರಿಗೆ ಮಾ. 14ರಂದು ಮಧ್ಯಾಹ್ನ 1.15ಕ್ಕೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿದ್ದರು.
ಈ ವಿಷಯ ಮುಖ್ಯಮಂತ್ರಿ ಕಚೇರಿ ವಿಶೇಷ ಅಧಿಕಾರಿಯಾದ ಕೆ. ವೈಷ್ಣವಿ ಅವರ ಗಮನಕ್ಕೆ ಮಧ್ಯಾಹ್ನ 1.30ಕ್ಕೆ ಮುಖ್ಯಮಂತ್ರಿ ಕಚೇರಿಯ ಉನ್ನತ ಅಧಿಕಾರಿಗಳ ಗಮನಕ್ಕೆ ಬಂದಿದೆ. ಮಾ.15ರಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ಈ ವಿಷಯ ತಂದು ವೆನ್ಲಾಕ್ ಆಸ್ಪತ್ರೆ, ರೋಗಿ, ಡಿಎಚ್‌ಒ ನಡುವೆ ಮನಸ್ವಯ ಸಾಧಿಸಿ ಮಾ.15ರಂದು ಮಧ್ಯಾಹ್ನ 2 ಗಂಟೆಗೆ ಮಹಿಳೆಗೆ ಚಿಕಿತ್ಸೆಯ ಭಾಗವಾಗಿ ಔಷಧಿಗಳನ್ನು ಉಚಿತವಾಗಿ ತಲುಪಿಸಲಾಗಿದೆ.- - -