ಅವುಜೀಕರ ಮಠ ಶಿಕ್ಷಣ ಸಂಸ್ಥೆ ಆರಂಭಿಸಿದರೆ ಸಹಕಾರ: ಸತೀಶ ಜಾರಕಿಹೊಳಿ

| Published : Sep 11 2024, 01:00 AM IST

ಅವುಜೀಕರ ಮಠ ಶಿಕ್ಷಣ ಸಂಸ್ಥೆ ಆರಂಭಿಸಿದರೆ ಸಹಕಾರ: ಸತೀಶ ಜಾರಕಿಹೊಳಿ
Share this Article
  • FB
  • TW
  • Linkdin
  • Email

ಸಾರಾಂಶ

ನಾಡಿನಲ್ಲಿ ಮಠ-ಮಾನ್ಯಗಳು ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಅವುಜೀಕರ ಜ್ಞಾನಯೋಗಾಶ್ರಮ ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ನಾಡಿನಲ್ಲಿ ಮಠ-ಮಾನ್ಯಗಳು ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಅವುಜೀಕರ ಜ್ಞಾನಯೋಗಾಶ್ರಮ ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪಟ್ಟಣದ ಹೊರವಲಯದ ಕ್ಯಾರಗುಡ್ ಬಳಿಯ ಸುಕ್ಷೇತ್ರ ಅವುಜೀಕರ ಜ್ಞಾನಯೋಗಾಶ್ರಮದಲ್ಲಿ ಅವುಜೀಕರ ಹಾಗೂ ಜಗನ್ನಾಥ ಮಹಾರಾಜರ ಸ್ಮರಣಾರ್ಥ ಮಂಗಳವಾರ ಏರ್ಪಡಿಸಿದ್ದ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಧರ್ಮ ಪ್ರಸಾರದ ಜೊತೆಗೆ ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಶ್ರೀಮಠದ ಮಲ್ಲೇಶ್ವರ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಇಂಚಗೇರಿ ಮಠದ ರೇವಣಸಿದ್ದೇಶ್ವರ ಮಹಾರಾಜರು, ಝಂಗಟಿಹಾಳ ಚಂದ್ರಶೇಖರ ಸ್ವಾಮೀಜಿ, ಯರನಾಳ ಬ್ರಹ್ಮಾನಂದ ಸ್ವಾಮೀಜಿ, ಘೋಡಗೇರಿ ಮಲ್ಲಯ್ಯ ಸ್ವಾಮೀಜಿ, ಅಭಿನವ ಮಂಜುನಾಥ ಸ್ವಾಮೀಜಿ, ಶಾಸಕ ದುರ್ಯೋಧನ ಐಹೊಳೆ, ಮಾಜಿ ಸಚಿವ ಶಶಿಕಾಂತ ನಾಯಿಕ, ಮುಖಂಡರಾದ ಪವನ ಕತ್ತಿ, ಮಹಾವೀರ ನಿಲಜಗಿ, ಎ.ಕೆ. ಪಾಟೀಲ, ದುಂಡಪ್ಪ ಬೆಂಡವಾಡೆ, ಸಂಜು ಪಾಟೀಲ, ರಾಯಪ್ಪ ಢೂಗ ಇತರರು ಇದ್ದರು. ಸಪ್ತಾಹ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳ, ಜಾಗರಣೆ ನಡೆಯಿತು. ನಾಡಿನ ವಿವಿಧ ಕಡೆಗಳಿಂದ ಸಹಸ್ರಾರು ಭಕ್ತಾಧಿಗಳು ಭಾಗವಹಿಸಿದ್ದರು.