ಸಾರಾಂಶ
ತರೀಕೆರೆಯ ಬರಗೇನಹಳ್ಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ನೆರವೇರಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ತರೀಕೆರೆ
ಶಾಲೆಗೆ ಅಗತ್ಯವಿರುವ ಸೌಲಭ್ಯಗಳನ್ನು ಇಲಾಖೆ ಸಹಕಾರದೊಂದಿಗೆ ಒದಗಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಅವರು, ಸಮೀಪದ ಬರಗೇನಹಳ್ಳಿಯಲ್ಲಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿ ನಂತರ ನೆಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಧು ಬಿ.ಎಚ್ ಅವರು ಮಾತನಾಡಿ, ಶಾಲೆ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಡೆಸ್ಕ್ ಅವಶ್ಯಕತೆ ಬಗ್ಗೆ ಪ್ರಸ್ತಾಪಿಸಿದರು.ಶಾಲೆ ಮುಖ್ಯ ಶಿಕ್ಷಕರಾದ ತಿಪ್ಪೇಶ್ ಅವರು ದೈಹಿಕ ಶಿಕ್ಷಕರನ್ನು ಶಾಲೆಗೆ ನಿಯೋಜಿಸುವಂತೆ ಮನವಿ ಮಾಡಿದರು. ಲಕ್ಕವಳ್ಳಿ ಶಿಕ್ಷಣ ಸಂಯೋಜಕರಾದ ವಸಂತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಎಂ.ಇ. ಶೇಖರಪ್ಪ ಶಾಲಾ ವತಿಯಿಂದ ಬಿನ್ನವತ್ತಳಿಕೆ ಅರ್ಪಿಸಿದರು.
ಬರಗೇನಹಳ್ಳಿ ಗ್ರಾಪಂ ಅಧ್ಯಕ್ಷರಾದ ಮೀನಾಕ್ಷಮ್ಮ, ಉಪಾಧ್ಯಕ್ಷರಾದ ಕಲಾವತಿ ಹಾಗೂ ಸದಸ್ಯರು, ಪಿಡಿಒ ಪಾಂಡುರಂಗ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಕೋಮಲ, ಸಮಿತಿ ಇನ್ನಿತರ ಸದಸ್ಯರು, ಅಂಗನವಾಡಿ ಶಿಕ್ಷಕಿ ಲತಾ, ಅತಿಥಿ ಶಿಕ್ಷಕಿ ಶುಷ್ಮಾ, ಕಾರ್ಯಪಾಲಕ ಅಭಿಯಂತರರು ನಾಗೇಂದ್ರಪ್ಪ ಜಿ.ಎ, ಶಿಕ್ಷಣ ಇಲಾಖೆ ಸಿಆರ್‌ಪಿ ಹಾಗೂ ಗ್ರಾಮದ ಮುಖಂಡರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೇವರಾಜ್.ಕೆ ಸ್ವಾಗತಿಸಿ, ಶಾಲಾ ಶಿಕ್ಷಕ ಹರೀಶ್.ಎಲ್ ನಿರೂಪಿಸಿ, ಸತೀಶ್ ಕುಮಾರ್ ವಂದಿಸಿದರು.