ಮಹಿಳೆಯರ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಹಕಾರ ಅಗತ್ಯ

| Published : Apr 02 2025, 01:03 AM IST

ಸಾರಾಂಶ

ಶಿವಮೊಗ್ಗ: ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಬದುಕು ಹಸನವಾಗಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಂಘ, ಸಂಸ್ಥೆಗಳ ನೆರವು ಅಗತ್ಯ ಎಂದು ಇಸ್ರೋ ಸಂಸ್ಥೆಯ ಡೆಪ್ಯೂಟಿ ಡೈರೆಕ್ಟರ್ ಶಿವಾನಿ ಕೋಣಂದೂರ್ ಅಭಿಮತ ವ್ಯಕ್ತಪಡಿಸಿದರು.

ಶಿವಮೊಗ್ಗ: ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಬದುಕು ಹಸನವಾಗಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಂಘ, ಸಂಸ್ಥೆಗಳ ನೆರವು ಅಗತ್ಯ ಎಂದು ಇಸ್ರೋ ಸಂಸ್ಥೆಯ ಡೆಪ್ಯೂಟಿ ಡೈರೆಕ್ಟರ್ ಶಿವಾನಿ ಕೋಣಂದೂರ್ ಅಭಿಮತ ವ್ಯಕ್ತಪಡಿಸಿದರು.

ನಗರದ ನವ್ಯಶ್ರೀ ಸಭಾಂಗಣದಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ತಂತ್ರಜ್ಞಾನ ಮುಂದುವರಿದ ಹಾಗೆ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾದ ಅವಕಾಶಗಳಿವೆ. ಮಹಿಳೆಯರು ಸರ್ಕಾರದಿಂದ ಸಿಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಿದಾಗ ಕುಟುಂಬ ಸುರಕ್ಷಿತವಾಗಿ ಸುಭಿಕ್ಷವಾಗಿ ಇರುತ್ತದೆ ಎಂದರು.

ಇಂದು ಶರಾವತಿ ಮಹಿಳಾ ಸಂಘ ಮತ್ತು ದೈವಜ್ಞ ಮಹಿಳಾ ಸಂಘ, ಇನ್ನರ್‌ವ್ಹೀಲ್‌ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಯವರು ನಿಜಕ್ಕೂ ಮಾನವೀಯ ಸೇವೆಯನ್ನು ಮಾಡುತ್ತಿರುವುದು ಖುಷಿ ತಂದಿದೆ ಎಂದು ನುಡಿದರು.

ಇಸ್ರೋ ಸಂಸ್ಥೆಯಲ್ಲಿ ಕರ್ನಾಟಕದ ಮಹಿಳೆಯರು ತುಂಬಾ ಕಡಿಮೆ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ದರಿಂದ ನಮ್ಮ ರಾಜ್ಯದ ಮಹಿಳೆಯರು ಉತ್ತಮ ಕೌಶಲ್ಯಗಳನ್ನು ರೂಢಿಸಿಕೊಂಡು ಇಂತಹ ಸಂಸ್ಥೆಯಲ್ಲಿ ಅವಕಾಶಗಳನ್ನು ಕಲ್ಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಗ್ದೇವಿ ಬಸವರಾಜ್ ಮಾತನಾಡಿ, ಬಿಡುವಿಲ್ಲದ ಕಾರ್ಯ ಚಟುವಟಿಕೆಗಳಲ್ಲಿ ಕುಟುಂಬದವರ ಸಹಕಾರವು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಇನ್ನರ್‌ವ್ಹೀಲ್‌ ಕ್ಲಬ್ ವತಿಯಿಂದ ಈಗಾಗಲೇ ಈ ವರ್ಷವಿಡಿ ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಅಂಗವಿಕಲರಿಗೆ ಅಶಕ್ತರಿಗೆ ಹಾಗೂ ಶಾಲಾ ಕಾಲೇಜುಗಳಿಗೆ ದಾನಿಗಳ ಸಹಾಯದಿಂದ ಸಾಕಷ್ಟು ನೆರವನ್ನ ನೀಡಿ ಪ್ರೋತ್ಸಾಹಿಸಿದ್ದೇವೆ ಎಂದು ತಿಳಿಸಿದರು.

ಇನ್ನರ್‌ವ್ಹೀಲ್‌ ಜಿಲ್ಲೆ 318 ಜಿಲ್ಲಾ ವೈಸ್ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕೇವಲ ದಿನಾಚರಣೆಯನ್ನಾಗಿ ಆಚರಿಸದೆ ಮನುಕುಲದ ಸೇವೆಗಳ ಮುಖಾಂತರ ಆಚರಿಸುತ್ತಿರುವುದು ತುಂಬಾ ಅರ್ಥಪೂರ್ಣವಾಗಿದೆ ಎಂದರು.

ಇದೇ ವೇಳೆ ಆರ್ಥಿಕವಾಗಿ ಹಿಂದುಳಿದ ಮೂರು ಜನ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು ಕಾರ್ಯಕ್ರಮದಲ್ಲಿ ಇನ್ನರ್‌ವ್ಹೀಲ್‌ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್, ದೈವಜ್ಞ ಮಹಿಳಾ ಸಂಘದ ಅಧ್ಯಕ್ಷರಾದ ಸೀಮಾ ಸದಾನಂದ, ಕಾರ್ಯದರ್ಶಿ ವಾಣಿ ಪ್ರವೀಣ್, ಲತಾ ಸೋಮಶೇಖರ್, ಶರಾವತಿ ಮಹಿಳಾ ಸಂಘದ ಅಧ್ಯಕ್ಷೆ ಮಾಲಾ ರಾಮಪ್ಪ, ನಮಿತಾ ಸೂರ್ಯನಾರಾಯಣ್, ವಿಜಯ ರಾಯ್ಕರ್‌, ರಾಜೇಶ್ವರಿ ಪ್ರತಾಪ್, ವೀಣಾ ಹರ್ಷ, ವೇದಾ ನಾಗರಾಜ್, ಮಧುರ ಮಹೇಶ್, ಆಶಾ ಶ್ರೀಕಾಂತ್, ಶ್ವೇತಾ ಆಶಿತ್, ಉಮಾ ವೆಂಕಟೇಶ್, ಇನ್ನರ್‌ವ್ಹೀಲ್ ಕ್ಲಬ್ಬಿನ ಮಾಜಿ ಅಧ್ಯಕ್ಷರುಗಳು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.