ಸಾರಾಂಶ
ಅನುಭವಿ ಹಾಗೂ ಉತ್ತಮ ಸೇವೆಗೈದ ನಿವೃತ್ತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿ ಸಲಹೆ, ಸೂಚನೆಗಳಿಂದ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ. ಸರ್ಕಾರವು ಈಗಾಗಲೇ ನಿವೃತ್ತರಿಗೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಿವೃತ್ತ ಪೊಲೀಸರಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ನೀಡುವ ಸೌಕರ್ಯದೊಂದಿಗೆ, ಇತರೆ ಸೌಲಭ್ಯಗಳನ್ನು ಸಹ ಕಲ್ಪಿಸಿಕೊಡಬೇಕು.
ಕನ್ನಡಪ್ರಭ ವಾರ್ತೆ ಕೆಜಿಎಫ್ಅಪರಾಧ ರಹಿತ ಉತ್ತಮ ಸಮಾಜ ನಿರ್ಮಿಸಲು ನಿವೃತ್ತ ಪೊಲೀಸರ ಸಹಕಾರ ಅಗತ್ಯವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅಭಿಪ್ರಾಯಪಟ್ಟರು.
ಕೆಜಿಎಫ್‌ನ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಅನುಭವಿ ಹಾಗೂ ಉತ್ತಮ ಸೇವೆಗೈದ ನಿವೃತ್ತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿ ಸಲಹೆ, ಸೂಚನೆಗಳಿಂದ ಅಪರಾಧಗಳನ್ನು ತಡೆಗಟ್ಟಲು ಸಾಧ್ಯವೆಂದು ಅಭಿಪ್ರಾಯಪಟ್ಟರು.ನಿವೃತ್ತರಿಗೆ ಸೌಲಭ್ಯ ಕಲ್ಪಿಸಿ
ಮುಖ್ಯ ಅತಿಥಿಗಳಾಗಿ ನಿವೃತ್ತ ಎಆರ್‌ಎಸ್‌ಐ ಆರ್.ರಮೇಶ್ ಧ್ವಜ ವಂದನೆ ಸ್ವೀಕರಿಸಿ ಮಾತನಾಡಿ, ೧೯೬೫ರ ಇಸವಿ ಏ.೨ ರಂದು ಕರ್ನಾಟಕ ಪೊಲೀಸ್ ಕಾಯ್ದೆಯು ಜಾರಿಗೆ ಬಂದಿದ್ದು, ಅಂದಿನಿಂದ ಪೊಲೀಸ್ ಧ್ವಜ ದಿನವನ್ನು ಪೊಲೀಸ್ ಕಲ್ಯಾಣ ದಿನವನ್ನಾಗಿ ಆಚರಿಸುತ್ತಿದ್ದು, ಸರ್ಕಾರವು ಈಗಾಗಲೇ ನಿವೃತ್ತರಿಗೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಿವೃತ್ತ ಪೊಲೀಸರಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ನೀಡುವ ಸೌಕರ್ಯದೊಂದಿಗೆ, ಇತರೆ ಸೌಲಭ್ಯಗಳನ್ನು ಸಹ ಕಲ್ಪಿಸಿಕೊಡಬೇಕೆಂದು ಕೋರಿದರು.ಇದೇ ಸಂದರ್ಭದಲ್ಲಿ ೨೦೨೪-೨೫ನೇ ಸಾಲಿನಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೆಜಿಎಫ್ ನಗರಸಭಾಧ್ಯಕ್ಷೆ ಇಂದಿರಾಗಾಂಧಿ, ಕೆಡಿಎ ಆಯುಕ್ತ ಧರ್ಮೆಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಲ್. ನರಸಿಂಹಮೂರ್ತಿ, ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.ಪೊಲೀಸ್ ಕಾ ನ್ಸಟೇಬಲ್ ಸದಾಶಿವ ಮನಗುಳಿ ಕಾರ್ಯಕ್ರಮ ನಿರೂಪಿಸಿ, ಸಿಪಿಐ ವೈ.ಆರ್. ರಂಗಶಾಮಯ್ಯ ವಂದನೆ ಸಲ್ಲಿಸಿದರು.