ಸಮಸ್ಯೆ ನಿವಾರಣೆಗೆ ಹಿರಿಯ ಅಧಿಕಾರಿಗಳ ಸಹಕಾರ ಅಗತ್ಯ : ನಿವೃತ್ತ ಪೊಲೀಸ್‌ ಅಧಿಕಾರಿ ಪ್ರಭಾಕರ್‌

| Published : Apr 03 2024, 01:40 AM IST / Updated: Apr 03 2024, 08:34 AM IST

ಸಮಸ್ಯೆ ನಿವಾರಣೆಗೆ ಹಿರಿಯ ಅಧಿಕಾರಿಗಳ ಸಹಕಾರ ಅಗತ್ಯ : ನಿವೃತ್ತ ಪೊಲೀಸ್‌ ಅಧಿಕಾರಿ ಪ್ರಭಾಕರ್‌
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ನಿರೀಕ್ಷಕರಾದ ಕೆ. ಪ್ರಭಾಕರ್ ಅವರನ್ನು ಸನ್ಮಾನಿಸಿ ಗೌರವಿಸಿದರು.  

 ಹಾಸನ :  ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಕಠಿಣ ಪರಿಸ್ಥಿತಿಯಲ್ಲೂ ಕೂಡ ಹಿರಿಯ ಪೊಲೀಸ್‌ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಪರಾಧ ತಡೆಗಟ್ಟುವ ಕೆಲಸ ಮಾಡಬಹುದು ಎಂದು ನಿವೃತ್ತ ಪೊಲೀಸ್ ನಿರೀಕ್ಷಕ ಕೆ.ಪ್ರಭಾಕರ್ ತಿಳಿಸಿದರು.

ನಗರದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ‘ಪೊಲೀಸ್ ಕಲ್ಯಾಣಕ್ಕಾಗಿ ಸಂಗ್ರಹಿಸಿದ ಹಣವನ್ನು ನಿವೃತ್ತ ಪೊಲೀಸ್‌ ಕಲ್ಯಾಣ ಕಾರ್ಯಕ್ರಮಗಳಿಗೆ ಉಪಾಯೋಗಿಸುವ ಸಲುವಾಗಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ನಾನು ಪೊಲೀಸ್ ಇಲಾಖೆಗೆ 1992 ರಲ್ಲಿ ಪೇದೆ ಆಗಿ ಸೇವೆಗೆ ಸೇರಲಾಯಿತು. ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ನನ್ನ ವೃತ್ತಿ ಆರಂಭಿಸಲಾಯಿತು. ನಂತರ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಲಾಯಿತು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುತ್ತಿತ್ತು’ ಎಂದು ಸ್ಮರಿಸಿದರು.

ಕಠಿಣ ಪರಿಸ್ಥಿತಿಯಲ್ಲೂ ಕೂಡ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಪರಾಧ ತಡೆಗಟ್ಟಲಾಗಿದೆ. ಪೊಲೀಸ್ ಎಂದರೆ ನಾಗರಿಕ ಪೊಲೀಸರಾಗಿ ಸಾರ್ವಜನಿಕರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮಾಹಿತಿಯನ್ನು ಸಂಗ್ರಹಿಸಿ ಪೊಲೀಸ್ ಇಲಾಖೆಯಿಂದ ಭದ್ರತೆ ಕೊಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತ ಬಂದಿದೆ. ಮಾಡುವ ಕೆಲಸದಲ್ಲಿ ಮೊದಲು ಶ್ರದ್ಧೆ ಇದ್ದರೆ ಎಲ್ಲವನ್ನು ನಿಭಾಯಿಸಬಹುದಾಗಿದೆ ಎಂದು ಅನುಭವ ಹಂಚಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಮಾತನಾಡಿ, ಈ ಕಾರ್ಯಕ್ರಮವನ್ನು ಮಾಡುತ್ತಿರುವುದು ನಿವೃತ್ತ ಪೊಲೀಸ್ ಸಿಬ್ಬಂದಿಗಾಗಿ. ಪೊಲೀಸ್ ಇಲಾಖೆ ಕೆಲಸ ಎಂದರೆ ಕ್ಲಿಷ್ಟಕರವಾಗಿದ್ದರೂ ನಿಭಾಯಿಸುತ್ತಾರೆ. ನಿವೃತ್ತರಾದ ಮೇಲೆ ಏನು ಮಾಡಬೇಕು ಎನ್ನುವುದು ತಿಳಿದಿರುವುದಿಲ್ಲ. ಪೊಲೀಸ್ ಸಿಬ್ಬಂದಿ ಕೆಲಸ ಮಾಡುವಾಗ ಶ್ರದ್ಧೆಯಿಂದ ಮಾಡುತ್ತಾರೆ. ನಿವೃತ್ತದರಾದ ಮೇಲೆ ಅವರ ಬಗ್ಗೆ ನಿಗಾವಹಿಸಿ ಈ ಧ್ವಜ ದಿನಾಚರಣೆ ಮಾಡಲಾಗುತ್ತಿದೆ ಎಂದರು.

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪೊಲೀಸ್ ನಿಧಾನಗತಿ ಮತ್ತು ಶೀಘ್ರ ಪಥಸಂಚಲನ ನಡೆಸಲಾಯಿತು. ದ್ವಜವನ್ನು ಬರಮಾಡಿಕೊಂಡು ಗೌರವ ಸೂಚಿಸಿದರು. ಪೊಲೀಸ್ ಧ್ವಜ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ನಿರೀಕ್ಷಕರಾದ ಕೆ. ಪ್ರಭಾಕರ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಇತ್ತೀಚೆಗೆ ನಿವೃತ್ತರಾದ ದೇಸಯ್ಯ ಮತ್ತು ನಾಗರಾಜು ಅವರನ್ನು ಸನ್ಮಾನಿಸಿ ಗೌರವಿಸಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷ ಎಂ.ಕೆ.ತಮ್ಮಯ್ಯ, ವೆಂಕಟೇಶ್ ನಾಯ್ಡ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಾಜ ಸೇವಕ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಹಾಸನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿ ಪ್ರಭಾಕರ್‌ ಅವರನ್ನು ಸನ್ಮಾನಿಸಲಾಯಿತು.