ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಸಹಕಾರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಕೊಡುಗೆ ಸ್ಮರಿಸಲು, ಅವರ ಗೌರವಾರ್ಥ ನ.14ರಿಂದ 20ರವರೆಗೆ ರಾಜ್ಯದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಲಿದೆ. ನ.14ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಹಕಾರ ಸಪ್ತಾಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ, ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಹಕಾರ ಸಪ್ತಾಹವು ಸಹಕಾರಿಗಳಿಗೆ ಹಬ್ಬವಿದ್ದಂತೆ. ಸಾವಿರಾರು ಸಹಕಾರಿಗಳು ಸಹಕಾರ ಚಳವಳಿಯ ಸಾಧನೆ-ವೈಫಲ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. 7 ದಿನಗಳ ಕಾಲ ವಿವಿಧ ವಿಷಯಗಳ ತಜ್ಞ ಉಪನ್ಯಾಸಕರಿಂದ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ. ಜತೆಗೆ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಸಹಕಾರ ಸಂಘಗಳು ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಡಲಾಗುತ್ತದೆ. ಈ ಬಾರಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ವಿಷಯದ ಅಡಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಶುಕ್ರವಾರ ಕಾರ್ಯಕ್ರಮ ಉದ್ಘಾಟನೆ ವೇಳೆ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ 70ಕ್ಕೂ ಹೆಚ್ಚು ಮಂದಿಗೆ ‘ಸಹಕಾರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಕೆ.ಎನ್.ರಾಜಣ್ಣ, ಎಸ್.ಟಿ. ಸೋಮಶೇಖರ್, ಶಾಸಕ ಕೆ.ಷಡಕ್ಷರಿ ಸೇರಿ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.ನ.15ರಂದು ರಾಯಚೂರು, ನ.16ರಂದು ಮಂಗಳೂರು, ನ.17ರಂದು ಹೊಸಪೇಟೆ, ನ.18ರಂದು ಹಾವೇರಿ, ನ.19ರಂದು ಕೊಪ್ಪಳ ಮತ್ತು ನ.20ರಂದು ಚಾಮರಾಜನಗರದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ನಡೆಯಲಿದೆ. ಸಹಕಾರ ಸಪ್ತಾಹದ ಅಂಗವಾಗಿ ಅಂತಾರಾಷ್ಟ್ರೀಯ ಸಹಕಾರ ಚಳವಳಿಯ ಮುಖಂಡತ್ವ ವಹಿಸಿದ್ದ ಬಿ.ಎಸ್.ವಿಶ್ವನಾಥ್ ಅವರ ಕಂಚಿನ ಪುತ್ಥಳಿಯನ್ನು ಸಹಕಾರ ಮಹಾಮಂಡಳ ಕಚೇರಿ ಮುಂಭಾಗದಲ್ಲಿ ಇಡಲಾಗುವುದು. ಅದನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಕೆ. ಷಡಕ್ಷರಿ ಇತರರಿದ್ದರು.---
ಪದವಿ ಪಠ್ಯದಲ್ಲಿ ಸೇರಿಸಿ: ಜಿಟಿಡಸಹಕಾರ ಕ್ಷೇತ್ರದ ಕುರಿತು ಈಗಿನ ಯುವ ಪೀಳಿಗೆಗೆ ತಿಳಿಸಲು ಪದವಿ ಪೂರ್ವ ಅಥವಾ ಪದವಿ ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಲಾಗುವುದು. ಅದರ ಜತೆ ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ 2 ಲಕ್ಷ ಸಿಬ್ಬಂದಿಯನ್ನು ಕಾಯಂ ಮಾಡಬೇಕು ಎಂದು ಆಗ್ರಹಿಸಲಾಗುವುದು ಎಂದು ಜಿ.ಟಿ. ದೇವೇಗೌಡ ಹೇಳಿದರು.===
7 ದಿನಗಳ ಉಪನ್ಯಾಸದ ವಿಷಯಗಳು:ನ.14: ಬೆಂಗಳೂರು- ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಹೆಚ್ಚಿಸಲು ಡಿಜಟಲೀಕರಣಕ್ಕೆ ಪ್ರೋತ್ಸಾಹಿಸುವುದು.
ನ.15: ರಾಯಚೂರು- ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ.ನ.16: ಮಂಗಳೂರು-ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿ.
ನ.17: ಹೊಸಪೇಟೆ-ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ.ನ.18: ಹಾವೇರಿ-ಸಹಕಾರಿ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ.
ನ.19: ಕೊಪ್ಪಳ-ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ.ನ.20: ಚಾಮರಾಜನಗರ-ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು.
;Resize=(128,128))
;Resize=(128,128))
;Resize=(128,128))
;Resize=(128,128))