ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯದಲ್ಲಿ ಒಂದು ಪರ್ಯಾಯ ಸರ್ಕಾರವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೇ ಕರ್ನಾಟಕದ ರಾಜ್ಯದ ಒಟ್ಟು ಬಜೆಟ್ ₹6.44 ಲಕ್ಷ ಕೋಟಿ. ಆದರೆ ರಾಜ್ಯದ ಸಹಕಾರಿ ಕ್ಷೇತ್ರದ ಒಟ್ಟು ಬಜೆಟ್ ₹24 ಲಕ್ಷ ಕೋಟಿಗಿಂತ ಹೆಚ್ಚಿದೆ.
ಶಿರಸಿ: ರಾಜ್ಯದ 7 ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಅತ್ಯಂತ ಪ್ರಬಲವಾಗಿ ಮತ್ತು ಗಟ್ಟಿಯಾಗಿ ಉಳಿದಿದೆ. ಎಲ್ಲಿ ಸಹಕಾರಿ ಕ್ಷೇತ್ರ ಗಟ್ಟಿಯಾಗಿ ಉಳಿದೆಲ್ಲವೂ ಅಂತ ಕ್ಷೇತ್ರದ ರೈತರು ಗಟ್ಟಿಯಾಗಿ ಉಳಿದಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಗಟ್ಟಿಯಾಗಿ ಉಳಿದಿರುವುದರಿಂದ ಇಲ್ಲಿಯ ರೈತರು ಗಟ್ಟಿಯಾಗಿ ಸುಭಿಕ್ಷೆಯಾಗಿದ್ದಾರೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ ಹೇಳಿದರು.ಅವರು ನಗರದ ಟಿಎಂಎಸ್ ಸಭಾಭವನದಲ್ಲಿ 73ನೇ ಸಹಕಾರ ಸಪ್ತಾಹದ ಅಂಗವಾಗಿ ಸಂಘದ ಹಿರಿಯ ಸದಸ್ಯರು, ಖರೀದಿದಾರರು ಹಾಗೂ ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯದಲ್ಲಿ ಒಂದು ಪರ್ಯಾಯ ಸರ್ಕಾರವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೇ ಕರ್ನಾಟಕದ ರಾಜ್ಯದ ಒಟ್ಟು ಬಜೆಟ್ ₹6.44 ಲಕ್ಷ ಕೋಟಿ. ಆದರೆ ರಾಜ್ಯದ ಸಹಕಾರಿ ಕ್ಷೇತ್ರದ ಒಟ್ಟು ಬಜೆಟ್ ₹24 ಲಕ್ಷ ಕೋಟಿಗಿಂತ ಹೆಚ್ಚಿದೆ ಎಂದರು.ಟಿಎಂಎಸ್ ಅಧ್ಯಕ್ಷ ಜಿ.ಟಿ. ಹೆಗಡೆ ತಟ್ಟಿಸರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಟಿಎಂಎಸ್ ಉಪಾಧ್ಯಕ್ಷ ಜಿ.ಎಂ. ಹೆಗಡೆ ಮುಳಕಂಡ್ ಸ್ವಾಗತಿಸಿದರು. ಗಿರಿಧರ್ ಕಬ್ನಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಈ ಸಂದರ್ಭದಲ್ಲಿ ಶಿರಸಿ ಎಪಿಎಂಸಿ ಉಪನಿರ್ದೇಶಕರು ಹಾಗೂ ಕಾರ್ಯದರ್ಶಿ ಎಂ. ರವಿಚಂದ್ರ, ರಾಮನಗೌಡ ಪಾಟೀಲ, ಟಿಎಂಎಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಹೆಗಡೆ, ದೊಡ್ನಳ್ಳಿ ಸರ್ಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಹೆಗಡೆ ಸೇರಿದಂತೆ ಅನೇಕರು ಇದ್ದರು.