ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟದ ಕಾರ್ಯವ್ಯಾಪ್ತಿಯ ಎಲ್ಲ ಸಹಕಾರ ಸಂಘಗಳು ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕೂಟಕ್ಕೆ ಸದಸ್ಯತ್ವ ಹೊಂದಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿ.ಮುನಿರಾಮು ತಿಳಿಸಿದರು

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟದ ಕಾರ್ಯವ್ಯಾಪ್ತಿಯ ಎಲ್ಲ ಸಹಕಾರ ಸಂಘಗಳು ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕೂಟಕ್ಕೆ ಸದಸ್ಯತ್ವ ಹೊಂದಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿ.ಮುನಿರಾಮು ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೊಮ್ಮವಾರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆವರಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರಿಗೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಸಹಕಾರ ಸಂಘಗಳು ಅನೇಕ ಕೊಡುಗೆಗಳನ್ನು ನೀಡುತ್ತಿವೆ. ರೈತರ ಅನುಕೂಲಕ್ಕೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳು ಸಾಲ ಸೌಲಭ್ಯ ನೀಡಿ ಆರ್ಥಿಕ ಚೈತನ್ಯ ನೀಡುತ್ತಿವೆ.

ಜಿಲ್ಲಾ ಸಹಕಾರ ಒಕ್ಕೂಟ ಪ್ರತಿ ವರ್ಷವೂ ಶಿಕ್ಷಣ ನಿಧಿ ಸಂಗ್ರಹಿಸಿ ಸಹಕಾರ ಸಂಘಗಳ ಸದಸ್ಯರಿಗೆ ತರಬೇತಿ ನೀಡುತ್ತಿದೆ ಹಾಗೂ ಸಹಕಾರ ತತ್ವಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಹೇಳಿದರು.

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಹಿತ್ತರಹಳ್ಳಿ ರಮೇಶ್ ಮಾತನಾಡಿ, ಬಿಡಿಸಿಸಿ ಬ್ಯಾಂಕ್ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಮಹಿಳೆಯರಿಗೆ ಸ್ವಸಹಾಯ ಸಂಘಗಳಿಗೆ ೫ ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಒಂದು ದಿನದ ತರಬೇತಿ ಕಾರ್ಯಕ್ರಮಗಳು ಹೆಚ್ಚು ನಡೆಸಬೇಕು ಎಂದು ಹೇಳಿದರು.

ಈ ವೇಳೆ ಡಿಎಸ್ಎಮ್ಎಸ್ ಅಧ್ಯಕ್ಷ ಎಂ.ಶ್ರೀನಿವಾಸ್, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಕಾರಹಳ್ಳಿ ಜಯರಾಮ್, ನಿರ್ದೇಶಕರಾದ ಜಿ.ಎಸ್.ಸಂಪಂಗಿ ಗೌಡ, ಟಿ.ರವಿ, ದುದ್ದನಹಳ್ಳಿ ವಿ.ಮುನಿರಾಜು, ಶಿವಣ್ಣ, ಜಿಲ್ಲಾ ಸಹಕಾರ ಒಕ್ಕೂಟದ ಸಿಇಒ ಟಿ.ಶಿವಕುಮಾರ್, ತಾಲೂಕು ಸೊಸೈಟಿ ಅಧ್ಯಕ್ಷ ರಾಮಮೂರ್ತಿ, ನಿರ್ದೇಶಕ ಚನ್ನಕೃಷ್ಣಪ್ಪ, ಬೊಮ್ಮವಾರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ರಾಜಣ್ಣ, ಜಿಲ್ಲಾ ಉಪ ನಿಬಂಧಕರಾದ ಬಿ.ಜಿ. ಮಂಜುಳಾ, ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಎಚ್.ಎಸ್.ನಾಗರಾಜಯ್ಯ, ರಾಜ್ಯ ತರಬೇತುದಾರ ಸ್ಟಾರ್ ವೆಂಕಟೇಶ್ ಮತ್ತಿತರರಿದ್ದರು.

೧೫ ದೇವನಹಳ್ಳಿ ಚಿತ್ರಸುದ್ದಿ: ೦೧

ದೇವನಹಳ್ಳಿ ತಾಲೂಕಿನ ಬೊಮ್ಮವಾರ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ತಾಲೂಕಿನ ಎಲ್ಲಾ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರಿಗೆ ಹಾಗೂ ಸಿಇಒಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿಯನ್ನು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿ.ಮುನಿರಾಮು ಉದ್ಘಾಟಿಸಿದರು.