ಜವಹರಲಾಲ್ ನೆಹರು ಅವರ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್ ಮಾಹೆಯಲ್ಲಿ ಒಂದು ವಾರಗಳ ಕಾಲ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ.
ಕನ್ನಡಪ್ರಭ ವಾರ್ತೆ, ಗುಂಡ್ಲುಪೇಟೆ
ಸಹಕಾರ ಸಂಸ್ಥೆಗಳು ಸಮಾಜ ಹಾಗೂ ದೇಶದ ಆರ್ಥಿಕತೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ ಎಂದು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರೂ ಆದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಪುತ್ತನಪುರ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ತಾಲೂಕಿನ ಎಲ್ಲಾ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ನಡೆದ 73 ನೇ ಸಹಕಾರ ಸಪ್ತಾಹ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರ ಸಂಘಗಳು ಷೇರುದಾರರ ಸಂಸ್ಥೆಗಳಾಗಿವೆ. ಇಲ್ಲಿ ಸಂಘದ ಸದಸ್ಯರೇ ಮಾಲೀಕರಾಗಿದ್ದು, ಸಹಕಾರ ಸಂಘಗಳನ್ನು ಉಳಿಸಿ, ಬೆಳೆಸುವ ಜೊತೆಗೆ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸದಸ್ಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಪ್ರತಿಪಾದಿಸಿದರು.ಸಪ್ತಾಹದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರೂ ಆದ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡ ಪ್ರಸಾದ್ ಮಾತನಾಡಿ, ಜವಹರಲಾಲ್ ನೆಹರು ಅವರ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್ ಮಾಹೆಯಲ್ಲಿ ಒಂದು ವಾರಗಳ ಕಾಲ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಹೇಳಿದರು.ಸಹಕಾರ ಸಂಘಗಳ ಸದಸ್ಯರು ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮುಂದಾಗಬೇಕು ಎಂದು ಅವರು ಹೇಳಿದರು.ಕೆಎಂಎಫ್ ಮಾಜಿ ನಿರ್ದೇಶಕ ಪಿ.ಬಿ.ರಾಜಶೇಖರ್, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಜಿ.ಮಡಿವಾಳಪ್ಪ, ಮುದ್ದಯ್ಯ, ಹಾಪ್ ಕಾಮ್ಸ್ ಅಧ್ಯಕ್ಷ ಎಂ.ನಾಗೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಾಡ್ರಹಳ್ಳಿ ನಾಗೇಂದ್ರ, ಪುತ್ತನಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುರೇಶ್ ಪಿ.ಎಸ್, ಪುತ್ತನಪುರ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಪಿ.ಎಂ.ಮಹದೇವಪ್ಪ, ಸಹಕಾರ ಸಂಘಗಳ ಉಪ ನಿಬಂಧಕಿ ಜ್ಯೋತಿ ಅರಸ್, ಸಹಕಾರ ಅಭಿವೃದ್ಧಿ ಅಧಿಕಾರಿ ಸರ್ವಮಂಗಳ, ಚಾಮುಲ್ ತಾಲೂಕು ಮೇಲ್ವಿಚಾರಕ ಎಚ್. ಪ್ರಕಾಶ್, ಚಾಮುಲ್ ವಿಸ್ತರಣಾಧಿಕಾರಿಗಳಾದ ಸಿದ್ಧಲಿಂಗಕೋರಿ, ರಂಚಿತ, ಉದಯ್ ಕುಮಾರ್, ಮಂಜೇಶ್, ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕಿ ಮನುಜ, ಪುತ್ತನಪುರ ಡೇರಿ ಸಿಇಒ ಮಹದೇವ ಪ್ರಸಾದ್, ಪ್ಟಾಕ್ಸ್ ಸಿಇಒ ಸಂಜು ಹಾಗೂ ತಾಲೂಕಿನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳು ಇದ್ದರು.