ಸಾರಾಂಶ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಗಿರೀಶ್ ವಿಜಯಕುಮಾರ ಪಾಟೀಲ ೨೭೫೪ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ವಾರ್ಡ್ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ ೧೭೬೨ ಮತಗಳನ್ನು ಪಡೆದಿದ್ದು, ೩೮ ನೋಟಾ ಚಲಾವಣೆಯಾಗಿವೆ ಎಂದು ಉಪ ಚುನಾವಣೆ ಚುನಾವಣಾಧಿಕಾರಿ ವಿನಯಕುಮಾರ ಪಾಟೀಲ ಪ್ರಕಟಿಸಿದರು.

ಸಂಭ್ರಮಾಚರಣೆ:ಬಿಜೆಪಿ ಅಭ್ಯರ್ಥಿ ಗಿರೀಶ ಪಾಟೀಲ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪರ ಜಯಘೋಷ ಮೊಳಗಿಸಿದರು.
ಫಲಿತಾಂಶ ಹೊರ ಬಿಳುತ್ತಿದ್ದಂತೆ ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದ ಕಾರ್ಯಕರ್ತರು ನಗರದ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ, ವಾರ್ಡ್ ನಂ.29 ಕಾಲೊನಿಗಳಲ್ಲಿ ಸಂಚರಿಸಿ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.