ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಕಾರ್ಕಳ ಕಾಂಗ್ರೆಸ್ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ರಾಜಕೀಯ ನೈತಿಕತೆಯ ಪ್ರಶ್ನೆ ಹುಟ್ಟಿಸುತ್ತವೆ ಎಂದು ಬಿಜೆಪಿ ಕಾರ್ಕಳ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದು, ನೈತಿಕತೆ ಮತ್ತು ತಾಕತ್ತು ಇದ್ದರೆ ಕಾಂಗ್ರೆಸ್ ನಾಯಕರು ತಮ್ಮದೇ ಸರ್ಕಾರದ ವಿರುದ್ಧ ಸ್ಟಿಕ್ಕರ್ ಅಭಿಯಾನ ನಡೆಸಲಿ ಎಂದು ಸವಾಲು ಹಾಕಿದ್ದಾರೆ.
ಕಾರ್ಕಳ: ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಕಾರ್ಕಳ ಕಾಂಗ್ರೆಸ್ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ರಾಜಕೀಯ ನೈತಿಕತೆಯ ಪ್ರಶ್ನೆ ಹುಟ್ಟಿಸುತ್ತವೆ ಎಂದು ಬಿಜೆಪಿ ಕಾರ್ಕಳ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದು, ನೈತಿಕತೆ ಮತ್ತು ತಾಕತ್ತು ಇದ್ದರೆ ಕಾಂಗ್ರೆಸ್ ನಾಯಕರು ತಮ್ಮದೇ ಸರ್ಕಾರದ ವಿರುದ್ಧ ಸ್ಟಿಕ್ಕರ್ ಅಭಿಯಾನ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸರ್ಕಾರದ ವಿವಿಧ ಕಾಮಗಾರಿಗಳಲ್ಲಿ ಶೇ.7ರಷ್ಟು ಕಮಿಷನ್ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಕಾಂಗ್ರೆಸ್ ಮುಖಂಡರು ಗಮನಿಸಬೇಕು. ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ಸ್ಟಿಕ್ಕರ್ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಕಾಣಿಸಿಕೊಳ್ಳದಿರುವ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಅವರನ್ನು ಸ್ವಪಕ್ಷದವರೇ ಅಭಿಯಾನದಿಂದ ಹೊರಗಿಟ್ಟರೇ ಅಥವಾ ಅವರು ಸ್ವತಃ ಅಭಿಯಾನದಿಂದ ದೂರ ಉಳಿದರೇ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ನವೀನ್ ನಾಯಕ್ ಆಗ್ರಹಿಸಿದ್ದಾರೆ.
