ಮಂಗಳೂರು: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-2026ರ ಅಂಗವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮಂಗಳೂರು ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇಲಾಖೆ ಸಹಯೋಗದಲ್ಲಿ ಭ್ರಷ್ಟಾಚಾರ ವಿರೋಧಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಾಕಥಾನ್ ಕಾರ್ಯಕ್ರಮ ನಡೆಯಿತು.ಮಂಗಳೂರಿನ ಎಸ್ಬಿಐ ಕಚೇರಿಯಿಂದ ಆರಂಭಗೊಂಡ ವಾಕಥಾನ್ ಕಾರ್ಯಕ್ರಮಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಸುರೇಶ್ ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಎಸ್ಬಿಐ ಮಂಗಳೂರು ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕಿ ಭಾರತಿ, ಲೋಕಾಯುಕ್ತ ಸಂಸ್ಥೆಯ ಸಿಬ್ಬಂದಿಗಳು ಮತ್ತು ಎಸ್ಬಿಐನ ವಿಜಿಲೆನ್ಸ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ಬಿ.ಎಂ.ವಿ.ಎಲ್. ನಾರಾಯಣ ರಾವ್ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಆಯೋಜಿಸಲಾದ ಈ ವಾಕಥಾನ್ ಮೂಲಕ ಸಾರ್ವಜನಿಕರಲ್ಲಿ ಭ್ರಷ್ಟಾಚಾರ ತಡೆಗಟ್ಟುವಿಕೆ, ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ನೈತಿಕ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಸಂದೇಶವನ್ನು ಸಾರಲಾಯಿತು.
ಭ್ರಷ್ಟಾಚಾರದ ಜಾಗೃತಿ ಅರಿವು ಸಪ್ತಾಹ: ವಾಕಥಾನ್
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-2026ರ ಅಂಗವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮಂಗಳೂರು ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇಲಾಖೆ ಸಹಯೋಗದಲ್ಲಿ ಭ್ರಷ್ಟಾಚಾರ ವಿರೋಧಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಾಕಥಾನ್ ಕಾರ್ಯಕ್ರಮ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.