ಭ್ರಷ್ಟಾಚಾರ ದೂರು; ಲೋಕಾಯುಕ್ತ ಪೊಲೀಸರ ದಾಳಿ

| Published : Feb 16 2025, 01:45 AM IST

ಸಾರಾಂಶ

ಯಾರೊಬ್ಬರೂ ಸಹ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಗತ್ಯ ದಾಖಲೆಗಳನ್ನು ಒದಗಿಸಿದರೂ ಸಹ ಯಾವುದೇ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತಿಲ್ಲ. ಬದಲಿಗೆ ಸಾರ್ವಜನಿಕರನ್ನು ಕಚೇರಿಗೆ ಮೇಲಿಂದ ಮೇಲೆ ಅಲೆಸುತ್ತಾರೆ ಎಂದು ದೂರಿದರು. ಈ ವೇಳೆ ಲೋಕಾಯಕ್ತ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ನೀಡಿ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಶ್ರೀರಂಗಪಟ್ಟಣ: ಪಟ್ಟಣ ಪುರಸಭೆಯಲ್ಲಿ ಭ್ರಷ್ಟಾಚಾರ ದೂರುಗಳು ಸಲ್ಲಿಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೋಲೀಸರು ದಾಳಿ ಮಾಡಿ ಕಡತಗಳನ್ನು ಪರಿಶೀಲಿಸಿದರು. ಶನಿವಾರ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ಕಡತಗಳ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಅಲ್ಲಿನ ಸಿಬ್ಬಂದಿ ವಿರುದ್ಧ ದೂರಿನ ಸುರಿಮಳೆಗೈದರು.

ಯಾರೊಬ್ಬರೂ ಸಹ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಗತ್ಯ ದಾಖಲೆಗಳನ್ನು ಒದಗಿಸಿದರೂ ಸಹ ಯಾವುದೇ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತಿಲ್ಲ. ಬದಲಿಗೆ ಸಾರ್ವಜನಿಕರನ್ನು ಕಚೇರಿಗೆ ಮೇಲಿಂದ ಮೇಲೆ ಅಲೆಸುತ್ತಾರೆ ಎಂದು ದೂರಿದರು. ಈ ವೇಳೆ ಲೋಕಾಯಕ್ತ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ನೀಡಿ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ನಂತರ ಪುರಸಭೆ ಕಚೇರಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರಿಗೆ ಎಷ್ಟು ತೊಂದರೆ ನೀಡಿದ್ದೀರಿ ಎಂಬುದು ನಮಗೆ ತಿಳಿಯುತ್ತಿದೆ. ನಿಮ್ಮ ಮುಂದೆಯೇ ದೂರುವಂತೆ ಮಾಡಿಕೊಂಡಿದ್ದೀರಿ. ಇನ್ನು ಮುಂದಾದರೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂಥ ಗುಣಗಳನ್ನು ಮೈಗೂಡಿಸಿಕೊಳ್ಳಿ ಎಂದು ಎಚ್ಚರಿಸಿರುವುದಾಗಿ ತಿಳಿದು ಬಂದಿದೆ.