ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದರಿಂದ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ: ಬಿವೈ ವಿಜಯೇಂದ್ರ
ಕನ್ನಡಪ್ರಭ ವಾರ್ತೆ ಜೇವರ್ಗಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದರಿಂದ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.ಕಲಬುರಗಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ್ ಅವರು ಸುಮಾರು ೨ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಕೇಂದ್ರದಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ 40 ಸ್ಥಾನಗಳಲ್ಲಿ ಗೆಲ್ಲಲು ಹರಸಾಹಸ ಪಡುತ್ತಿರುವ ರಾಹುಲ್ ಗಾಂಧಿ. ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವುದಾಗಿ ತಿಳಿಸಿದ್ದರು. ಆದರೆ ಕೇಂದ್ರ ಸರ್ಕಾರದಿಂದ ಕಳಿಸಿದ ಅಕ್ಕಿಯನ್ನು ಮಾತ್ರ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಪ್ರಧಾನಿ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯ್ನಾಗಿಸಲು ದೇಶದ ಜನತೆ ಪಣ ತೊಟ್ಟಿದ್ದಾರೆ. ಎಂದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ವೃತ್ತದ ಹತ್ತಿರ ಮಾತನಾಡಿದ ಅವರು ಭಾರತ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪರ ಗಾಳಿಯಿದ್ದು ಪ್ರಸಕ್ತ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಎಂದರು.ರೋಡ್ ಶೋ ಆರಂಭಕ್ಕೂ ಮುನ್ನ ಪಟ್ಟಣದ ಶ್ರೀಷಣ್ಮುಖ ಶಿವಯೋಗಿಗಳ ಮಠ ಹಾಗೂ ಮಹಾಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದುಕೊಂಡರು. ಪಟ್ಟಣದ ಷಣ್ಮುಖ ಶಿವಯೋಗಿಗಳ ಮಠದಿಂದ ಅಖಂಡೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ರೋಡ ಶೋ ನಡೆಸಲಾಯಿತು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ರಮೇಶಬಾಬು ವಕೀಲ, ಮಾಜಿ ಸಚಿವ ಬಾಬುರಾವ್ ಚವ್ಹಾಣ, ಶೋಭಾ ಬಾಣಿ, ಭೀಮರಾವ್ ಗುಜಗೊಂಡ, ಅಶ್ವಥನಾರಾಯಾಣಗೌಡ, ಶರಣು ತಳ್ಳಿಕೇರಿ, ಹಳ್ಳೆಪ್ಪಾಚಾರ್ಯ ಜೋಶಿ, ಧರ್ಮಣ್ಣ ದೊಡ್ಡಮನಿ, ಅಶೋಕ ಸಾಹು ಗೋಗಿ, ಎಂ.ಬಿ. ಪಾಟೀಲ ಹರವಾಳ, ರೇವಣಸಿದ್ದಪ್ಪ ಸಂಕಾಲಿ. ಹಣಮಂತರಾಯ ಹೂಗಾರ, ಷಣ್ಮುಖಪ್ಪ ಸಾಹು ಗೋಗಿ, ಮಲ್ಲಶೆಟ್ಟೆಪ್ಪಗೌಡ ಹಿರೇಗೌಡ, ಧರ್ಮಣ್ಣ ಇಟಗಾ ಸೇರಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು.