- ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ (ಕಡ್ಡಾಯ)

| Published : Jun 16 2024, 01:53 AM IST

- ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ (ಕಡ್ಡಾಯ)
Share this Article
  • FB
  • TW
  • Linkdin
  • Email

ಸಾರಾಂಶ

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ಸರ್ಕಾರಿ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳು ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ಸರ್ಕಾರಿ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳು ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಯ್ಯಾಳಪ್ಪ, ಜೂ.4 ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ.

ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ. ಆದರೆ, ಹೆಚ್ಚುವರಿ ಅಂಕಗಳು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ ಎಂದರು.

ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಇದರ ಕುರಿತು ಸೂಕ್ತ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಓ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ಮಾತನಾಡಿ, ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಐಡಿಎಸ್‌ಓ ಸರ್ಕಾರವನ್ನು ಆಗ್ರಹಿಸುತ್ತದೆ ಎಂದರು.

ಎಐಡಿಎಸ್‌ಓ ಇನ್ನೋರ್ವ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಬಸವರಾಜ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.