6-7 ಮಂತ್ರಿಗಳ ಭ್ರಷ್ಟಾಚಾರ ದಾಖಲೆಗಳು ಶೀಘ್ರ: ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ

| Published : Sep 29 2024, 01:35 AM IST / Updated: Sep 29 2024, 07:47 AM IST

HD Kumaraswamy
6-7 ಮಂತ್ರಿಗಳ ಭ್ರಷ್ಟಾಚಾರ ದಾಖಲೆಗಳು ಶೀಘ್ರ: ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ತಮ್ಮ ಬಳಿ ಇರುವ ದಾಖಲೆಗಳನ್ನು ಬಹಿರಂಗಪಡಿಸಿದರೆ ಕಾಂಗ್ರೆಸ್‌ ಸರ್ಕಾರದ ಆರೇಳು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದು, ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗ ಮಾಡುವುದಾಗಿಯೂ ‘ಬಾಂಬ್‌’ ಸಿಡಿಸಿದ್ದಾರೆ.

 ಬೆಂಗಳೂರು : ತಮ್ಮ ಬಳಿ ಇರುವ ದಾಖಲೆಗಳನ್ನು ಬಹಿರಂಗಪಡಿಸಿದರೆ ಕಾಂಗ್ರೆಸ್‌ ಸರ್ಕಾರದ ಆರೇಳು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದು, ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗ ಮಾಡುವುದಾಗಿಯೂ ‘ಬಾಂಬ್‌’ ಸಿಡಿಸಿದ್ದಾರೆ.

ಶನಿವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಅದಕ್ಕಿಂತ ಹೆಚ್ಚಿನ ಪರ್ಸೆಂಟ್‌ ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್‌ ಸರ್ಕಾರದ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಹಿರಂಗ ಮಾಡುವೆ ಎಂದು ತಿಳಿಸಿದರು.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಕಣ್ಣಲ್ಲಿ ನೀರು ಹಾಕಿಸಿದವರು ಉಳಿಯುವುದಿಲ್ಲ. ದೇವೇಗೌಡ ಅವರು ಶಿವನ ಮೇಲೆ ನಂಬಿಕೆ ಇಟ್ಟು ಬದುಕು ನಡೆಸುತ್ತಿದ್ದಾರೆ. ಅವರ ನೋವಿನಲ್ಲಿ ಈ ಸರ್ಕಾರ ಭಸ್ಮವಾಗಲಿದೆ ಎಂಬುದನ್ನು ಭಗವಂತ ತೋರಿಸುತ್ತಾನೆ ಎಂದರು.