ಕನ್ನಡಪ್ರಭ ವಾರ್ತೆ ವಿಜಯಪುರ

ಧಾರವಾಡದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಏ.26ರಂದು ಬೆಳಗ್ಗೆ 9.30ಕ್ಕೆ ರಾಜ್ಯ ಪದಾಧಿಕಾರಿಗಳ ಪದಗ್ರಹಣ, ವಿವಿಧ ರಂಗದ ಸಾಧಕರಿಗೆ, ನೌಕರರಿಗೆ, ಕಾಯಕರತ್ನ ಮತ್ತು ಅತ್ಯುತ್ತಮ ಸೇವಾ ಸಂಸ್ಥೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಸ್ಕ್ರತಿ ಮತ್ತು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿ ಲತಾ ಬಿರಾದಾರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕ್ರತಿ ಮತ್ತು ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾ ಘಟಕಗಳ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಗೌರವ ಸನ್ಮಾನವು ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟಕರಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗಮಿಸಲಿದ್ದು, ಕಾಯಕರತ್ನ ಪ್ರಶಸ್ತಿ ಪ್ರದಾನವನ್ನು ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ನೆರವೇರಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪರಿಷತ್ ಜಿಲ್ಲಾಧ್ಯಕ್ಷೆ ಕಮಲಾ‌ ಮುರಾಳ, ಪದಾಧಿಕಾರಿಗಳಾದ ಕೆ.ಸುನಂದಾ, ಪರ್ವಿನಬಾನು ಶೇಖ, ಜಿ.ಪಿ.ಬಿರಾದಾರ, ಪಕ್ರುದ್ದಿನ ಅಲಿ ಅಹಮ್ಮದ ಇದ್ದರು.