ಕಲೆ ಮತ್ತು ಸಂಸ್ಕೃತಿ ಅನಾವರಣಕ್ಕೆ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಉತ್ತಮ ವೇದಿಕೆ ಎಂದು ಕೊಡಗು ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕ ಡಾ. ರಘುನಾಥ್ ಬಿ.ಎನ್. ಅಭಿಪ್ರಾಯಪಟ್ಟಿದ್ದಾರೆ.
ವಿರಾಜಪೇಟೆ: ಕಲೆ ಮತ್ತು ಸಂಸ್ಕೃತಿ ಅನಾವರಣಕ್ಕೆ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಉತ್ತಮ ವೇದಿಕೆ ಎಂದು ಕೊಡಗು ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕ ಡಾ. ರಘುನಾಥ್ ಬಿ.ಎನ್. ಅಭಿಪ್ರಾಯಪಟ್ಟಿದ್ದಾರೆ.
ವಿರಾಜಪೇಟೆಯ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕದ ಪದಗ್ರಹಣ ಹಾಗೂ ಆದರ್ಶ ಸೇವ ರತ್ನ ಪ್ರಶಸ್ತಿ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ನ ಸಂಸ್ಥಾಪಕ ರಾಜ್ಯ ಗೌರವಾಧ್ಯಕ್ಷ ಎಲ್. ಐ. ಲಕ್ಕಮ್ಮನವರ ಮಾತನಾಡಿ ಸರ್ಕಾರಿ ನೌಕರರಲ್ಲಿರುವ ಪ್ರತಿಭೆಗಳನ್ನು ಹೊರ ತರುವುದೇ ಈ ವೇದಿಕೆ ಉದ್ದೇಶ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಮತ್ತು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜ್ಯ ಪ್ರಧಾನ ಕಾರ್ಯದರ್ಶಿ ಪರ್ವಿನ್ ಬಾನು ಬುಳ್ಳಣ್ಣವರ್ ಮಾತನಾಡಿ ವೃತ್ತಿಯ ಜೊತೆಗೆ ಪ್ರವೃತ್ತಿ ಬೆಳೆಸಿಕೊಳ್ಳುವುದು ಮುಖ್ಯ ಎಂದರು. ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ರಾಜ್ಯ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾದ ಹೇಮಲತಾ ಅವರಿಗೆ ಆದೇಶ ಪತ್ರ ವಿತರಿಸಲಾಯಿತು.ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಮಲಮ್ಮ ಕೆ.ಎನ್. ಮಾತನಾಡಿ ಕೊಡಗು ಜಿಲ್ಲಾ ಘಟಕದ ಈ ಸಾಹಿತ್ಯ ಪರಿಷತ್ತು ರಾಜ್ಯದಾದ್ಯಂತ ರಾರಾಜಿಸಲಿ ಎಂದರು.
ಈ ಸಂದರ್ಭ ನೃತ್ಯ ಪ್ರದರ್ಶನ, ಚಂಡೆ ಮೇಳ, ಉಮ್ಮತ್ತಾಟ್ ಪ್ರದರ್ಶನ, ಹಾಡುಗಾರಿಕೆ ನಡೆಯಿತು.ವಿರಾಜಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ಎಂ ತಿಮ್ಮಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು, ದೇವರಾಜ್ ಬಿ. ಟಿ., ರಾಜೇಶ್ ಕೆ ಆರ್, ಅಶ್ವಿನ್ ಕುಮಾರ್ ಎಚ್ ಬಿ ಉಪಸ್ಥಿತರಿದ್ದರು. ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪದ್ಮ ಹೆಚ್ .ಎನ್ ಪ್ರಾರ್ಥಿಸಿ, ಖಜಾಂಚಿ ಉತ್ತಪ್ಪ ಸ್ವಾಗತಿಸಿದರು. ಪದ್ಮ ಹಾಗೂ ಜಯಮಾಲ ನಿರೂಪಿಸಿದರು.
ಪ್ರಶಸ್ತಿ ಪ್ರದಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಆದರ್ಶ ಸೇವ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಘಟನಾ ಕ್ಷೇತ್ರದಲ್ಲಿ ಬಿ . ಟಿ.ದೇವರಾಜ್, ಸಾಹಿತ್ಯ ಕ್ಷೇತ್ರದಲ್ಲಿ ಮನ ಕೆ ಆರ್, ಮಾಧ್ಯಮ ಕ್ಷೇತ್ರದಲ್ಲಿ ಶಶಿ ಅಚ್ಚಪ್ಪ, ಬಿ. ಎನ್. ಶಾಂತಿಭೂಷಣ್, ಸಮಾಜ ಸೇವಾ ಕ್ಷೇತ್ರದಲ್ಲಿ ಸಾಧಿಕ್ ಅಹಮದ್, ಪೂಜಾ ಸಜೇಶ್, ಮಹೇಶ್ ಅಪ್ಪಯ್ಯ, ಕಲಾಕ್ಷೇತ್ರದಲ್ಲಿ ಮೀನಾಕ್ಷಿ, ಪ್ರೇಮಾಂಜಲಿ ಆಚಾರ್ಯ ಎಸ್, ಶಿಕ್ಷಣ ಕ್ಷೇತ್ರದಲ್ಲಿ ಕೆ ಆರ್ ವಿಶಾಲಾಕ್ಷಮ್ಮ, ಟಿ ವಿ ಭಾಗ್ಯವತಿ ಅಣ್ಣಪ್ಪ ಅವರಿಗೆ ಆದರ್ಶ ಸೇವ ರತ್ನ ಪ್ರಶಸ್ತಿಯನ್ನು ಗಣ್ಯರು ಪ್ರದಾನ ಮಾಡಿ ಗೌರವಿಸಿದರು.ಕೊಡಗು ಜಿಲ್ಲಾ ಘಟಕದ ಪದಗ್ರಹಣ: ಜಿಲ್ಲಾ ಘಟಕದ ಪದಗ್ರಹಣ ಸಮಾರಂಭವು ನಡೆಯಿತು. ಜಿಲ್ಲಾ ಅಧ್ಯಕ್ಷರಾಗಿ ಕಮಲಮ್ಮ ಕೆ. ಎನ್., ಮಹಾ ಪೋಷಕರಾಗಿ ರಾಜೇಶ್ ಕೆ ಆರ್, ಗೌರವಾಧ್ಯಕ್ಷರಾಗಿ ಡಾ .ರಘುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಹೆಚ್ ಬಿ, ಕಾರ್ಯಧ್ಯಕ್ಷರಾಗಿ ಜಯಮಾಲ ಎಸ್ ಕೆ, ಖಜಾಂಚಿಯಾಗಿ ಉತ್ತಪ್ಪ ವಿ ಎನ್, ಹಿರಿಯ ಉಪಾಧ್ಯಕ್ಷರಾಗಿ ಪ್ರೇಮ ಹೆಚ್. ಎಸ್., ಉಪಾಧ್ಯಕ್ಷರಾಗಿ ದೀಪ ಡಿ ಎಸ್, ಜಂಟಿ ಕಾರ್ಯದರ್ಶಿಯಾಗಿ ಸುನಿಲ್ ರಾಜ್ ಇ. ಕೆ., ಸಂಘಟನಾ ಕಾರ್ಯದರ್ಶಿಯಾಗಿ ರಾಣಿ ಎಸ್ ಕೆ, ಸಹ ಕಾರ್ಯದರ್ಶಿಯಾಗಿ ಸುನಿತಾ ಕುಮಾರಿ, ಕ್ರೀಡಾ ಕಾರ್ಯದರ್ಶಿಯಾಗಿ ರವಿಕಾಂತ್ ಎಂ ಎನ್ ಹಾಗೂ ಪದ್ಮಾವತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪದ್ಮ ಎಚ್ ಎನ್, ಕಾನೂನು ಸಲಹೆಗಾರರಾಗಿ ಗೋವಿಂದರಾಜ್, ತಾಂತ್ರಿಕ ಸಲಹೆಗಾರರಾಗಿ ಕಮರುನ್ನಿಸ ಡಿ ಎ ರವರು ಅಧಿಕಾರವನ್ನು ಸ್ವೀಕರಿಸಿದರು. ಆಯ್ಕೆಯಾದ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ ಅತಿಥಿಗಳು ನೇಮಕಾತಿಯ ಪ್ರಮಾಣ ಪತ್ರವನ್ನು ನೀಡಿದರು. ರಾಜ್ಯ ಉಪಾಧ್ಯಕ್ಷರಾದ ಗಣೇಶ್ ನಿಲುವಾಗಿಲು ಅವರು ನೂತನ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.