ವಿಜಯಪುರ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ಮೇ 30 ರಂದು ಬೆಳಿಗ್ಗೆ 8 ಗಂಟೆಗೆ ಅಫಜಲಪುರ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ನಡೆಯಲಿದೆ.

ಅಲ್ಪ ಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಆಯ್ಕೆಯಾದ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳು ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಕೌನ್ಸಲಿಂಗ್‌ನಲ್ಲಿ ಭಾಗವಹಿಸಬಹುದಾಗಿದೆ.

ವಿದ್ಯಾರ್ಥಿಗಳು ತಪ್ಪದೇ ಕೌನ್ಸಲಿಂಗ್‌ಗೆ ಹಾಜರಾಗಲು ಜಿಲ್ಲಾ ಅಧಿಕಾರಿಗಳು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಮೌಲಾನಾ ಆಜಾದ ಭವನ, ಜಿಲ್ಲಾ ಪಂಚಾಯತ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-586109 ಹಾಗೂ ದೂರವಾಣಿ ಸಂಖ್ಯೆ: 08352-295523 ಸಂಪರ್ಕಿಸಿ.