ಸಾರಾಂಶ
ವಿಶೇಷವಾಗಿ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ತಮ್ಮ ಬಾಲ್ಯದಿಂದಲೇ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾ
ಕನ್ನಡಪ್ರಭ ವಾರ್ತೆ ಮೈಸೂರು
ವಿದ್ಯಾರ್ಥಿಗಳು ದೈಹಿಕ, ಬೌದ್ಧಿಕ, ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಗಳನ್ನು ಬೆಳೆಸಿಕೊಂಡರೆ ಮಾತ್ರ ಜೀವನದಲ್ಲಿ ಗುರಿ ಮುಟ್ಟಲು ಸಾಧ್ಯ ಎಂದು ಪತ್ರಕರ್ತ ಪ್ರಕಾಶ್ ಶೆಟ್ಟಿ ಅಭಿಮತ ವ್ಯಕ್ತಪಡಿಸಿದ್ದಾರೆ.ವಿಜಯನಗರದಲ್ಲಿರುವ ಅನಂತಗೀತ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿ, ಏಕಾಗ್ರತೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಹೇಗೆ ಎಂಬ ವಿಷಯದ ಬಗ್ಗೆ ಕುವೆಂಪುನಗರದ ವಿವೇಕ ಬಳಗದ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶೇಷವಾಗಿ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ತಮ್ಮ ಬಾಲ್ಯದಿಂದಲೇ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ವಿಷಯಗಳಾದ ಬೌದ್ಧಿಕ, ದೈಹಿಕ, ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಗಳ ಬಗ್ಗೆ ರಾಷ್ಟ್ರ ನಿಮಾ೯ತೃಗಳ ಜೀವನಶೈಲಿ ಬಗ್ಗೆ ಕತೆ ಹೇಳುವ ಮೂಲಕ ಅರಿವು ಮೂಡಿಸಿದರು.ವಿವೇಕ ಬಳಗದ ಅಧ್ಯಕ್ಷ ಸುರೇಶ್, ಮುಖ್ಯ ಶಿಕ್ಷಕ ಎಚ್.ಪಿ. ಲೋಕೇಶ್, ಶಿಕ್ಷಕರಾದ ಜಮುನಾ, ಶಿಲ್ಪಾ, ಕಾವೇರಮ್ಮ, ಉಷಾ, ತೇಜಸ್ವಿ ಹಾಗೂ ವಿದ್ಯಾರ್ಥಿಗಳು ಇದ್ದರು.