ದೊಡ್ಡಬಳ್ಳಾಪುರದಲ್ಲಿ ಭಾನುವಾರ ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಯೋಜಿಸಿದ್ದ ನಾಯಕತ್ವ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಜ್ಞಾನ ಗ್ರಾಮದ ನೀಲನಕ್ಷೆ ಅನಾವರಣಗೊಳಿಸಲಾಯಿತು. | Kannada Prabha
Image Credit: KP
ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ
ಸಾಗರ: ತಾಲೂಕಿನ ಶ್ರೀಕ್ಷೇತ್ರ ಸಿಗಂದೂರಿನ ಚೌಡೇಶ್ವರಿದೇವಿ ಪೂಜೆಗೆ ಸಂಬಂಧಪಟ್ಟಂತೆ ಸಾಗರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಎಸ್.ಪಿ. ಶೇಷಗಿರಿ ಭಟ್ ಅವರಿಗೆ ಪೂಜೆ ಮಾಡಲು ಅಡ್ಡಿಪಡಿಸಬಾರದು ಎಂದು ತಿಳಿಸಿದೆ. ಈ ಹಿಂದೆ ಸಿಗಂದೂರು ಚೌಡೇಶ್ವರಿ ದೇವಿಯ ಪೂಜೆಗೆ ಸಂಬಂಧಪಟ್ಟಂತೆ ಧರ್ಮದರ್ಶಿ ಡಾ. ರಾಮಪ್ಪ ಮತ್ತು ಪ್ರಧಾನ ಅರ್ಚಕ ಎಸ್.ಪಿ. ಶೇಷಗಿರಿ ಭಟ್ ನಡುವೆ ವಿವಾದ ಉಂಟಾಗಿತ್ತು. ಪೂಜೆ ಯಾರು ಮಾಡಬೇಕು ಎನ್ನುವುದಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಆವರಣದಲ್ಲಿ ಪರಸ್ಪರ ಜಗಳ ನಡೆದು ಪೊಲೀಸರು ಮಧ್ಯಪ್ರವೇಶ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ದೇವಿಪೂಜೆ ಮಾಡಲು ತಮಗೆ ಅವಕಾಶ ಕಲ್ಪಿಸುವಂತೆ ಪ್ರಧಾನ ಅರ್ಚಕ ಶೇಷಗಿರಿ ಭಟ್ ಸಾಗರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯವು ಪ್ರಧಾನ ಅರ್ಚಕರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಧರ್ಮದರ್ಶಿ ಡಾ.ರಾಮಪ್ಪ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ಪ್ರತಿವಾದವನ್ನು ಆಲಿಸಿ ಹಿಂದಿನ ಆದೇಶದಂತೆ ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ ಮಾಡಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.