ಸಾರಾಂಶ
ಐತಿಹಾಸಿಕ ಐಹೊಳೆ ಗ್ರಾಮದಲ್ಲಿರುವ ಚಾಲುಕ್ಯ ವಾಸ್ತು ಶಿಲ್ಪಕಲೆಗಳು, ಜನವಸತಿಯ ಮಧ್ಯದಲ್ಲಿದ್ದು, ಅವುಗಳ ಸಂರಕ್ಷಣೆಗಾಗಿ ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡಿತು.
ಕನ್ನಡಪ್ರಭವಾರ್ತೆ ಅಮೀನಗಡ
ಐತಿಹಾಸಿಕ ಐಹೊಳೆ ಗ್ರಾಮದಲ್ಲಿರುವ ಚಾಲುಕ್ಯ ವಾಸ್ತು ಶಿಲ್ಪಕಲೆಗಳು, ಜನವಸತಿಯ ಮಧ್ಯದಲ್ಲಿದ್ದು, ಅವುಗಳ ಸಂರಕ್ಷಣೆಗಾಗಿ ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಹಾಗೂ ಸರ್ಕಾರದ ಪುರಾತತ್ವ ವಸ್ತು ಸಂಗ್ರಹಾಲಯ, ಪುರಾತತ್ವ ಇಲಾಖೆ ಹಾಗೂ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರದೊಂದಿಗೆ ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾಧಿಕಾರಿ ಜಾನಕಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಇದ್ದರು.