ಕೋವಿಡ್‌ ಭೀತಿ: ಕೊಡಗು ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ

| Published : Dec 22 2023, 01:30 AM IST

ಸಾರಾಂಶ

ಕೊಡಗು-ಕೇರಳ ಚೆಕ್ ಪೋಸ್ಟ್ ಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ತಪಾಸಣೆಯಲ್ಲಿ ತೊಡಗಿದ್ದಾರೆ. ವಿರಾಜಪೇಟೆಯ ಪೆರಂಬಾಡಿ, ಪೊನ್ನಂಪೇಟೆ ತಾಲೂಕಿನ ಕುಟ್ಟ, ಮಡಿಕೇರಿ ತಾಲೂಕಿನ ಕರಿಕೆ ಮತ್ತು ಸಂಪಾಜೆ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಜ್ಯದಲ್ಲಿ ರೂಪಾಂತರಿ ಕೋವಿಡ್ ಸೋಂಕಿನಿಂದ ಮೂವರು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ. ಕೊಡಗು-ಕೇರಳ ಚೆಕ್ ಪೋಸ್ಟ್ ಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ತಪಾಸಣೆಯಲ್ಲಿ ತೊಡಗಿದ್ದಾರೆ. ವಿರಾಜಪೇಟೆಯ ಪೆರಂಬಾಡಿ, ಪೊನ್ನಂಪೇಟೆ ತಾಲೂಕಿನ ಕುಟ್ಟ, ಮಡಿಕೇರಿ ತಾಲೂಕಿನ ಕರಿಕೆ ಮತ್ತು ಸಂಪಾಜೆ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ಮಡಲಾಗುತ್ತಿದೆ.

ಕೇರಳದಿಂದ ಕೊಡಗಿಗೆ ನಿತ್ಯ ನೂರಾರು ವಾಹನಗಳು ಬರುವ ಹಿನ್ನೆಲೆ ಆರೋಗ್ಯ ಇಲಾಖೆ ಸಿಬ್ಬಂದಿ ಕೇರಳದಿಂದ ಬರುವ ಎಲ್ಲಾ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಿದ್ದಾರೆ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ಗಳನ್ನು ಕೂಡ ಸಿದ್ಧ ಮಾಡಲಾಗುತ್ತಿದೆ. ಪ್ರತ್ಯೇಕ ವಾರ್ಡ್ ಸಿದ್ಧ ಮಾಡಲಾಗಿದ್ದು,

ಮತ್ತೆ ಕೋವಿಡ್ ಗೆ ಚಿಕಿತ್ಸೆಗೆ ಸಿದ್ಧರಾಗಿದ್ದೇವೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಆಸ್ಪತ್ರೆ ಡೀನ್ ವಿಲಾಶ್ ಕುಮಾರ್ ತಿಳಿಸಿದ್ದಾರೆ.