ನಮ್ಮ ಭಾರತದ ಸಂಸ್ಕೃತಿಯಲ್ಲಿ ಗೋಮಾತೆಗೆ ವಿಶೇಷ ಸ್ಥಾನವಿದ್ದು, ಅದನ್ನು ಪೂಜಿಸುತ್ತಾ ಬಂದಿದ್ದೇವೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ರಾಣಿಬೆನ್ನೂರು:ನಮ್ಮ ಭಾರತದ ಸಂಸ್ಕೃತಿಯಲ್ಲಿ ಗೋಮಾತೆಗೆ ವಿಶೇಷ ಸ್ಥಾನವಿದ್ದು, ಅದನ್ನು ಪೂಜಿಸುತ್ತಾ ಬಂದಿದ್ದೇವೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ತಾಲೂಕಿನ ಐರಣಿ ಹೊಳೆಮಠದಲ್ಲಿ ನೂತನವಾಗಿ ನಿರ್ಮಿಸಲಾದ 200 ಗೋವುಗಳನ್ನು ಕಟ್ಟುವ ಸಾಮರ್ಥ್ಯದ ಗೋ ಶಾಲೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಗೋಶಾಲೆ ಕಟ್ಟಿ ಅವುಗಳ ಸಂರಕ್ಷಣೆ ಮಾಡುವುದು ಉತ್ತಮ ಕಾರ್ಯ ಎಂದರು.ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಗೋ ರಕ್ಷಣೆ ನಮ್ಮೇಲ್ಲರ ಹೊಣೆಯಾಗಿದೆ. ಶ್ರೀಮಠದಲ್ಲಿ ಗೋಮಾತೆಯನ್ನು ನಿರಂತರವಾಗಿ ಪೋಷಣೆ ಮಾಡುತ್ತಾ ಬರಲಾಗಿದೆ ಎಂದರು. ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಮಾತನಾಡಿ, ಐರಣಿ ಹೊಳೆಮಠದಲ್ಲಿ ಗುರು ಪೀಠ ಆಗಿ. ಜನರಿಗೆ ಇರಲು ಜಾಗವಿದೆ. ಜ್ಞಾನಕ್ಕೆ ಮಕ್ಕಳ ವ್ಯವಸ್ಥೆ ಮಾಡಲಾಗುತ್ತಿದೆ. ಗೋ ರಕ್ಷಣೆ ಮಾಡುವ ನಿಟ್ಟಿನಲ್ಲಿ ಗೋಶಾಲೆ ನಿರ್ಮಾಣ ಮಾಡಿರುವುದು ಉತ್ತಮ ಕಾರ್ಯವಾಗಿದೆ ಎಂದರು. ಬಸವರಾಜ ದೇಶಿಕೇಂದ್ರ ಸ್ವಾಮೀಜಿ ಹಾಗೂ ಮಠದ ಉತ್ತರಾಧಿಕಾರಿ ಸಿದ್ಧಾರೂಢ ಭಾರತಿ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.ಜಿಪಂ ಮಾಜಿ ಅಧ್ಯಕ್ಷ ಮಂಜುನಾಥ ಓಲೇಕಾರ, ಬಾಬಣ್ಣ ಶೆಟ್ಟರ, ಚೋಳಪ್ಪ ಕಸವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೀರೇಶ ಮೋಟಗಿ, ಚಂದ್ರಣ್ಣ ಬೇಡರ, ಭಾರತಿ ಜಂಬಗಿ, ಪವನಕುಮಾರ ಮಲ್ಲಾಡದ ಮತ್ತಿತರರಿದ್ದರು.