ಜನಪರ ಅಂಶಗಳನ್ನು ಒಳಗೊಂಡ ರಾಜಕೀಯ ಆಂದೋಲನ ರೂಪಿಸುವ ನಿಟ್ಟಿನಲ್ಲಿ ಸಿಪಿಐ ರಾಜ್ಯದಾದ್ಯಂತ ಕೈಗೊಂಡಿರುವ ಪರ್ಯಾಯ ರಾಜಕಾರಣಕ್ಕಾಗಿ ಜನದನಿಯ ರ‍್ಯಾಲಿ ಎಂಬ ಬೃಹತ್ ಪ್ರತಿಭಟನಾ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿಸೆಂಬರ್ 21ರಂದು ಬೆಂಗಳೂರಿನಲ್ಲಿ ಜರುಗಲಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಡಾ.ಪ್ರಕಾಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಜನಚಳವಳಿ ಕೇಂದ್ರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 2025ರ ನವೆಂಬರ್ 1 ರಿಂದ ಡಿಸೆಂಬರ್ 2 ರವರೆಗೆ ನಡೆದಿರುವ ಕಾರ್ಯಕರ್ತರ ಮನೆ ಮನೆ ಭೇಟಿ, ಕಿರುಪತ್ರ ಹಂಚುವಿಕೆ ಮೂಲಕ ಜನರಿಗೆ ಆಳುವ ಪಕ್ಷಗಳ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡುವುದಲ್ಲದೆ, ಹೊಸ ರಾಜಕೀಯ ಶಕ್ತಿಯ ಉದಯಕ್ಕೆ ನಾಂದಿ ಹಾಡುವಂತೆ ಮನವೊಲಿಸುವ ಪ್ರಯತ್ನ ನಡೆದಿದೆ.ಇದರ ಸಮಾರೋಪ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಡಿಸೆಂಬರ್ 21 ರಂದು ಸುಮಾರು 30 ಸಾವಿರಕ್ಕೂ ಅಧಿಕ ರೈತರು, ಕಾರ್ಮಿಕರು, ಯುವಜನರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ನಗರ ಕಾರ್ಯದರ್ಶಿ ಎ.ಲೋಕೇಶ್, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್,ಜಿ.ಕಮಲ ಮತ್ತಿತರರು ಪಾಲ್ಗೊಂಡಿದ್ದರು.