ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷೆ ಆಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಆಗ್ರಹಿಸಿ ಸೋನಮ್ ವಾಂಗ್ಚೂಕ್ ನವದೆಹಲಿಯಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಬಾಗೇಪಲ್ಲಿಯಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಮುಖಂಡ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, 2026 ರಲ್ಲಿ ನಡೆದ ನೀಡ್ ಪರೀಕ್ಷೆಯ ಪ್ರಶ್ನ ಪತ್ರಿಕೆ ಸೋರಿಕೆಯಿಂದ ಇಡೀ ದೇಶ ವ್ಯಾಪ್ತಿ ನೀಟ್ ಪರೀಕ್ಷೆ ಬರೆದದಂತಹ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ಇದಕ್ಕೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚೂಕ್ ರವರಿಗೆ ಬೆಂಬಲವಾಗಿ ಸಿಪಿಐ(ಎಂ) ಪಕ್ಷ ನಿಲ್ಲುತ್ತೆ. ಈ ವಿಚಾರದಲ್ಲಿ ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡುವಂತೆ ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸಿಪಿಐಎಂ ತಾಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮರೆಡ್ಡಿ ಮಾತನಾಡಿ, ನೀಟ್ ಪರೀಕ್ಷೆ ಪ್ರಶ್ನ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರ ಜೀವನವೇ ಹಾಳಾಗಿದೆ ಇದಕ್ಕೆ ಕೇಂದ್ರ ಬಿಜೆಪಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವೇ ಕಾರಣ. ಪ್ರಶ್ನಪತ್ರಿಕೆ ಸೋರಿಕೆ ವಿಚಾರದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಡಿ.ಟಿ.ಮುನಿಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವ ನೀಟ್ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು, ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ಚನ್ನರಾಯಪ್ಪ, ವಾಲ್ಮೀಕಿ ಅಶ್ವತ್ಥಪ್ಪ, ಬಿಳ್ಳೂರು ನಾಗರಾಜು, ಸೋಮಶೇಖರ್, ಮುನಿಯಪ್ಪ,ರಾಮಾಂಜಿ, ರಾಮಲಿಂಗಪ್ಪ, ಕೃಷ್ಣಪ್ಪ, ಇಮ್ರಾನ್, ರವಣಪ್ಪ ಮತ್ತಿತರರು ಇದ್ದರು. 20ಬಿಜಿಪಿ-1: ನೀಟ್ ಪರೀಕ್ಷೆ ಆಕ್ರಮ ಖಂಡಿಸಿ ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ ಚೂಕ್ ರವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಬಾಗೇಪಲ್ಲಿಯಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.