ಸಿಪಿಐ(ಎಂಎಲ್) ರೆಡ್ಸ್ಟಾರ್ ಪಕ್ಷದ 13ನೇ ರಾಷ್ಟ್ರೀಯ ಮಹಾ ಅಧಿವೇಶನವನ್ನು ಸೆ.16 ರಿಂದ 20 ರವರೆಗೆ ರಾಯಚೂರಿನಲ್ಲಿ ಹಮ್ಮಿಕೊಂಡಿರುವುದಾಗಿ ರಾಷ್ಟ್ರೀಯ ಮಹಾ ಅಧಿವೇಶನ ಸ್ವಾಗತ ಸಮಿತಿ ಉಪಾಧ್ಯಕ್ಷ ಎಚ್.ಎನ್.ಬಡಿಗೇರ ತಿಳಿಸಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ದೇಶದಲ್ಲಿ ಕಾರ್ಪೋರೇಟ್ ಬಂಡವಾಳಶಾಹಿ, ಸಂಘ ಪರಿವಾರದ ಹಿಂದುತ್ವ ಫ್ಯಾಸಿಸಂ ಮತ್ತು ನವ ಉದಾರವಾದದ ದಾಳಿಗಳು ಪ್ರಜಾಪ್ರಭುತ್ವ ಜಾತ್ಯಾತೀತ ಹಾಗೂ ಸಾಂವಿಧಾನಿಕ ಮೌಲ್ಯಗಳಿಗೆ ಗಂಭೀರ ಸವಾಲಾಗಿದ್ದು, ಅವುಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಗುಣಾತ್ಮಕ ಚರ್ಚೆಗಳು ನಡೆಯಲಿವೆ ಎಂದರು.

- ಎಚ್.ಎನ್.ಬಡಿಗೇರ ಮಾಹಿತಿ। 300ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ

-------

ಕನ್ನಡಪ್ರಭ ವಾರ್ತೆ ಸಿಂಧನೂರು

ಸಿಪಿಐ(ಎಂಎಲ್) ರೆಡ್ಸ್ಟಾರ್ ಪಕ್ಷದ 13ನೇ ರಾಷ್ಟ್ರೀಯ ಮಹಾ ಅಧಿವೇಶನವನ್ನು ಸೆ.16 ರಿಂದ 20 ರವರೆಗೆ ರಾಯಚೂರಿನಲ್ಲಿ ಹಮ್ಮಿಕೊಂಡಿರುವುದಾಗಿ ರಾಷ್ಟ್ರೀಯ ಮಹಾ ಅಧಿವೇಶನ ಸ್ವಾಗತ ಸಮಿತಿ ಉಪಾಧ್ಯಕ್ಷ ಎಚ್.ಎನ್.ಬಡಿಗೇರ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ದೇಶದಲ್ಲಿ ಕಾರ್ಪೋರೇಟ್ ಬಂಡವಾಳಶಾಹಿ, ಸಂಘ ಪರಿವಾರದ ಹಿಂದುತ್ವ ಫ್ಯಾಸಿಸಂ ಮತ್ತು ನವ ಉದಾರವಾದದ ದಾಳಿಗಳು ಪ್ರಜಾಪ್ರಭುತ್ವ ಜಾತ್ಯಾತೀತ ಹಾಗೂ ಸಾಂವಿಧಾನಿಕ ಮೌಲ್ಯಗಳಿಗೆ ಗಂಭೀರ ಸವಾಲಾಗಿದ್ದು, ಅವುಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಗುಣಾತ್ಮಕ ಚರ್ಚೆಗಳು ನಡೆಯಲಿವೆ ಎಂದರು.

ಉತ್ತರಾಖಂಡದ ಹಲ್ದ್ವಾನಿಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಜಾತಿಯ ಕಾರಣದಿಂದ ಹಿಂದುತ್ವ ಸಂಘಟನೆಗಳು ಶುದ್ಧೀಕರಣ ಮಾಡಿರುವುದು ದಲಿತ ಸಮುದಾಯಕ್ಕೆ ಮಾತ್ರವಲ್ಲ, ಪ್ರಜಾತಾಂತ್ರಿಕ ವ್ಯವಸ್ಥೆಗೆ ಮಾಡಿದ ಬಹುದೊಡ್ಡ ಅವಮಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಎಂ.ಗಂಗಾಧರ ಮಾತನಾಡಿ, ಫ್ಯಾಸಿಸಂ ಅತ್ಯಂತ ತೀವ್ರ ಗತಿಯಲ್ಲಿ ಬೆಳೆಯುತ್ತಿದ್ದು, ಜನರನ್ನು ವಿವಿಧ ಪ್ರಚೋದನಕಾರಿ ಹೇಳಿಕೆಗಳಿಂದ ವಿಭಜನೆ ಮಾಡಲಾಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಹೆಚ್ಚುತ್ತಿದ್ದು, ಪ್ರಜಾಪ್ರಭುತ್ವದ ಮೇಲೆ ದುರ್ದಾಳಿ ನಡೆಯುತ್ತಿದೆ. ಕಾರ್ಪೋರೇಟ್ ಕಂಪನಿಗಳಿಗೆ ಭೂ ಸ್ವಾಧೀನ ಮಾಡಿ ಕೊಡುವ ಕಾರ್ಯ ನಿರಾಂತಕವಾಗಿ ನಡೆದಿದೆ ಎಂದು ಆರೋಪಿಸಿದರು.

ಸೆ.16 ರಂದು ರಾಷ್ಟ್ರೀಯ ಮಹಾ ಅಧಿವೇಶನ ಸಿದ್ಧರಾಮಜಂಬಲದಿನ್ನಿ ರಂಗಮಂದಿರಲ್ಲಿ ಉದ್ಘಾಟನೆಯಾಗಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಕಾಶ ಅಂಬೇಡ್ಕರ್, ಚಂದ್ರಶೇಖರ ಆಜಾದ್ ಸೇರಿದಂತೆ 62 ದೇಶಗಳ ಕಮ್ಯುನಿಷ್ಟ್ ನಾಯಕರು ಆಗಮಿಸಲಿದ್ದಾರೆ. 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದು, 1 ದಿನ ಅಂತಾರಾಷ್ಟ್ರೀಯ ವಿಚಾರ ಸಂಕಿರಣ, 2 ದಿನ ರಾಷ್ಟ್ರೀಯ ವಿಷಯಕ್ಕೆ ಸಂಬಂಧಪಟ್ಟ ಸಂಗತಿಗಳು ಚರ್ಚೆಯಾಗಲಿವೆ. 80ಕ್ಕೂ ಹೆಚ್ಚು ಜನ ಕರ್ನಾಟಕ ಪ್ರತಿನಿಧಿಗಳೇ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಚಿಂತಕ ನಾರಾಯಣ ಬೆಳಗುರ್ಕಿ ಮಾತನಾಡಿದರು. ತಾಲೂಕು ಘಟಕದ ಕಾರ್ಯದರ್ಶಿ ಮಾಬುಸಾಬ ಬೆಳ್ಳಟ್ಟಿ, ಸದಸ್ಯ ತಿಮ್ಮಣ ಯಾದವ ಉಪಸ್ಥಿತರಿದ್ದರು.

-----ಫೋಟೊ---

17ಕೆಪಿಎಸ್‌ಎನ್‌ಡಿ01:

ಸಿಂಧನೂರಿನಲ್ಲಿ ಸಿಪಿಐ(ಎಂಎಲ್) ರೆಡ್ಸ್ಟಾರ್ ಪಕ್ಷದ 13ನೇ ರಾಷ್ಟ್ರೀಯ ಮಹಾ ಅಧಿವೇಶದ ಫೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.