ಖಿನ್ನತೆಯಿಂದ ವ್ಯಕ್ತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಯುವಕರು ದುಶ್ಚಟಗಳಿಂದ ದೂರವಿರಬೇಕು

ಗಂಗಾವತಿ: ಯುವಕರು ದುಶ್ಚಟಗಳಿಗೆ ದಾಸರಾಗುತ್ತಿರುವುದರಿಂದ ಅನೇಕ ಕುಟುಂಬ ಬೀದಿಗೆ ಬಂದಿವೆ.ವ್ಯಸನ ಮುಕ್ತ ಸಮಾಜ ನಿರ್ಮಾಣ ಅವಶ್ಯ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.

ನಗರದ ಉಪವಿಭಾಗ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಉಪವಿಭಾಗ ಆಸ್ಪತ್ರೆಯಿಂದ ಗುರುವಾರ ಏರ್ಪಡಿಸಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೊಪ್ಪಳ ಪೊಲೀಸ್ ವರಿಷ್ಟಾಧಿಕಾರಿ ಡಾ.ರಾಮ ಎಲ್. ಅರಸಿದ್ದಿ ಮಾತನಾಡಿ, ಖಿನ್ನತೆಯಿಂದ ವ್ಯಕ್ತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಯುವಕರು ದುಶ್ಚಟಗಳಿಂದ ದೂರವಿರಬೇಕು ಎಂದರು.

ಗಂಡುಮಕ್ಕಳು 21 ಹಾಗೂ ಹೆಣ್ಣುಮಕ್ಕಳು 18 ವರ್ಷ ತುಂಬಿದ ಬಳಿಕ ಮದುವೆಯಾಗಬೇಕು. ಮೂರು ವರ್ಷದ ಬಳಿಕ ಮೊದಲ ಮಗು ಪಡೆಯಬೇಕು ಕುಟುಂಬ ಕಲ್ಯಾಣ ಕಾರ್ಯಕ್ರಮ ಪಾಲಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗಂಗಾವತಿ ಉಪವಿಭಾಗ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಈಶ್ವರ ಸವಡಿ, ಗಂಗಾವತಿ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್, ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ ಮಾಳಿ, ಡಾ. ರವೀಂದ್ರ, ಡಾ. ಸೋಮಶೇಖರ್, ಆರೋಗ್ಯ ಇಲಾಖೆ ಸಿಬ್ಬಂದಿ ರಾಜೀವ್, ಶಿವಾನಂದ, ಯಮನೂರಪ್ಪ, ಕಿರಣ ಮಲ್ಲಿಕಾರ್ಜುನ ಎಚ್. ಮತ್ತು ಸ್ಫೂರ್ತಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.