ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತವರಣ ಕಲ್ಪಿಸಿ

| Published : Mar 11 2025, 12:48 AM IST

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತವರಣ ಕಲ್ಪಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲ ಮಕ್ಕಳಿಗೂ ಶಿಕ್ಷಣದಲ್ಲಿ ಅನುಕೂಲ ವಾತವರಣ ಕಲ್ಪಿಸುವ ನಿಟ್ಟಿನಲ್ಲಿ ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ ಸಲಹೆ ನೀಡಿದರು

ಕನ್ನಡಪ್ರಭ ವಾರ್ತೆ ಮಧುಗಿರಿ

ಎಲ್ಲ ಮಕ್ಕಳಿಗೂ ಶಿಕ್ಷಣದಲ್ಲಿ ಅನುಕೂಲ ವಾತವರಣ ಕಲ್ಪಿಸುವ ನಿಟ್ಟಿನಲ್ಲಿ ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ ಸಲಹೆ ನೀಡಿದರು.

ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಶ್ರಾವಂಡನಹಳ್ಳಿ ಮತ್ತು ಮಿಡಿಗೇಶಿ ಹೋಬಳಿ ಕಾರೇಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯಲ್ಲಿ 18 ಕೋಟಿ ರು.ವೆಚ್ಚದ ನೂತನ ಕಟ್ಟಡಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ವಸತಿ ಶಾಲೆಗಳಲ್ಲಿ ಕುಂದು- ಕೊರತೆಗಳಿದ್ದರೆ ನಮ್ಮ ಗಮನಕ್ಕೆ ತಂದು ಸರಿಪಡಿಸಿಕೊಳ್ಳಲು ಶಿಕ್ಷಕರು ಮತ್ತು ಇಲಾಖಾ ಅಧಿಕಾರಿಗಳು ಮುಂದಾಗಬೇಕು. ಹಾಸ್ಟೆಲ್‌ಗಳಲ್ಲಿ ಸಾಕಷ್ಟು ಸ್ಥಳಾವಕಾಶವಿರುವ ಕಾರಣ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಲು ಪ್ರೋತ್ಸಾಹಿಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಾಗಿ ಬೇಕಾದ ಎಲ್ಲ ಆಟದ ಪರಿಕರಗಳನ್ನು ಹಾಗೂ ಸೂಕ್ತ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ ಅವರು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಮಕ್ಕಳು ಉತ್ತಮ ಫಲಿತಾಂಶ ಪಡೆಯಬೇಕು. ಶಿಕ್ಷಕರು ಸಹ ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ ಪಡಿಸಲು ಆಸಕ್ತಿ ವಹಿಸಬೇಕು.ಆಗ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಠು ಗಮನ ಹರಿಸಿ ಬಡ ಮಕ್ಕಳ ಶಿಕ್ಷಣ ಕಲಿಕೆಗೆ ಪೂರಕವಾಗಿ ಕೆಲಸ ಮಾಡಲು ಉತ್ಸಾಹ ತೋರುತ್ತಾರೆ ಎಂದರು.

ಮಕ್ಕಳು ಕಲಿಯುವ ವಯಸ್ಸಿನಲ್ಲಿ ತಪ್ಪು ಹೆಜ್ಜೆ ಇಡದಂತೆ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಗುಣ ಮಟ್ಟದ ಶಿಕ್ಷಣ ಕಲಿಯಬೇಕು. ಹೆತ್ತವರಿಗೆ,ಶಿಕ್ಷಣ ಕಲಿಸಿದ ಗುರುಗಳಿಗೆ ಕೀರ್ತಿ ತರಬೇಕು ಎಂದರು.

ಶ್ರಾವಂಡನಹಳ್ಳಿ ಅಲ್ಪಸಂಖ್ಯಾತರ ಇಲಾಖೆ ಮುರಾರ್ಜಿ ವಸತಿ ಶಾಲೆ ಕಟ್ಟಡ ಕಾಮಗಾರಿ ಕೆಆರ್‌ಡಿಎಲ್‌ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೆನೆಗುದಿಗೆ ಬಿದ್ದಿರುವುದನ್ನು ಅಲ್ಲಿನ ಪ್ರಾಂಶುಪಾಲ ಮರಳುಸಿದ್ಧೇಶ್ವರ ಎಂಎಲ್‌ಸಿ ಆರ್‌.ರಾಜೇಂದ್ರ ಅವರ ಗಮನಕ್ಕೆ ತಂದಾಗ ತಕ್ಷಣ ಕೆಆರ್‌ಡಿಎಲ್‌ ಎಇಇ ಸಿಂಧೂ ಅವರಿಗೆ ದೂರವಾಣಿ ಮೂಲಕ ಮಾತನಾಡಿ, ಗುತ್ತಿಗೆದಾರರನ್ನು ತಾವು ಸಂಪರ್ಕಿಸಿ ಅತಿ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ತಾಕೀತು ಮಾಡಿದರು.

ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾಧಿಕಾರಿ ಶಬ್ಬೀರ್ ಆಹಮದ್‌, ಕರ್ನಾಟಕ ಗೃಹ ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಹಾಲೇಶಪ್ಪ, ಕೆಪಿಸಿಸಿ ಸದಸ್ಯ ಎಂ.ಎಸ್‌.ಮಲ್ಲಿಕಾರ್ಜುನಯ್ಯ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಆದಿನಾರಾಯಣರೆಡ್ಡಿ, ಪ್ರಾಂಶುಪಾಲ ಮರಳು ಸಿದ್ದೇಶ್ವರ, ಗ್ರಾಪಂ ಮಾಜಿ ಅಧ್ಯಕ್ಷ ಪಂಚಾಕ್ಷರಯ್ಯ, ತಾಪಂ ಇಒ ಲಕ್ಷ್ಮಣ್‌, ಮಾಜಿ ಸದಸ್ಯ ಜೆ.ಡಿ.ವೆಂಕಟೇಶ್‌ ಸೇರಿದಂತೆ ಅನೇಕರಿದ್ದರು.