ಸಾರಾಂಶ
ಹಾವೇರಿ: ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಇಂದಿನ ಯುವಕರಲ್ಲಿ ರಕ್ತದಾನದ ಕುರಿತು ಅರಿವು ಮೂಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ನೀವೆಲ್ಲ ಒಟ್ಟಾಗಿ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು, ರಕ್ತದಾನದ ಮಹತ್ವದ ಕುರಿತು ಮಾತನಾಡಿದರು.
ನಗರದ ಜಿಲ್ಲಾಸ್ಪತ್ರೆಯ ಆವರಣದಿಂದ ಆರಂಭಗೊಂಡ ಜನ ಜಾಗೃತಿ ಜಾಥಾದಲ್ಲಿ ಜಾಗೃತಿ ಘೋಷಣೆಗಳನ್ನು ಕೂಗುತ್ತಾ, ಕರಪತ್ರಗಳನ್ನು ಹಂಚುತ್ತಾ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಬಂದು ತಲುಪಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಘವೇಂದ್ರಸ್ವಾಮಿ ಎಚ್.ಎಸ್., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ನೀಲೇಶ ಎಂ.ಎನ್., ಪೊಲೀಸ್ ಇಲಾಖೆ ಸಿಬ್ಬಂದಿ, ಜಿಲ್ಲಾ ಏಡ್ಸ್ ನಿಯಂತ್ರಣ ಕೇಂದ್ರದ ಸಿಬ್ಬಂದಿ ಸತೀಶಕುಮಾರ ಹೊಸಮನಿ, ವಿರಾಜ ಸುಣಗಾರ, ಮಂಜುನಾಥ ಹಟ್ಟಿ, ಮಂಜುನಾಥ ಟಿ.ಬಿ. ಹಾಗೂ ಜಿಲ್ಲೆಯ ಎಲ್ಲ ಐಸಿಟಿಸಿ ಕೇಂದ್ರದ ಸಿಬ್ಬಂದಿ, ಎಆರ್‌ಟಿ ಕೇಂದ್ರದ ವೈದ್ಯಾಧಿಕಾರಿಗಳು, ಜಿಲ್ಲೆಯ ಎಲ್ಲ ರಕ್ತ ನಿಧಿಕೇಂದ್ರದ ಸಿಬ್ಬಂದಿ, ಜಿಲ್ಲಾ ಆಸ್ಪತ್ರೆಯಲ್ಲಿರುವ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಇದ್ದರು. ೧೧ಎಚ್‌ವಿಆರ್೨-ಹಾವೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-೨೦೨೩ರ ನಿಮಿತ್ತ ಏರ್ಪಡಿಸಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಚಾಲನೆ ನೀಡಿದರು.