ಆರೋಗ್ಯ, ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಿ

| Published : Jul 16 2024, 12:32 AM IST

ಸಾರಾಂಶ

ಡೆಂಘೀ, ಮಲೇರಿಯಾ, ಚಿಕನ್ ಗುನ್ಯಾ ಸೊಳ್ಳೆಗಳಿಂದ ಹರಡುತ್ತವೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ಹುಟ್ಟಿಕೊಳ್ಳುತ್ತವೆ. ಪರಿಸರವನ್ನು ಸ್ವಚ್ಛವಾಗಿ ಇಡುವುದರ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಡೆಂಘೀ, ಮಲೇರಿಯಾ, ಚಿಕನ್ ಗುನ್ಯಾ ಸೊಳ್ಳೆಗಳಿಂದ ಹರಡುತ್ತವೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ಹುಟ್ಟಿಕೊಳ್ಳುತ್ತವೆ. ಪರಿಸರವನ್ನು ಸ್ವಚ್ಛವಾಗಿ ಇಡುವುದರ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಹೇಳಿದರು.

ತಾಲೂಕಿನ ದಿಂಡವಾರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಈಚೆಗೆ ಜಿಲ್ಲಾ ಪಂಚಾಯತಿ, ಜಲಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಹಮ್ಮಿಕೊಂಡಿದ್ದ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ತರಬೇತಿ ಸಭೆಯಲ್ಲಿ ಮಾತನಾಡಿದ ಅವರು, ತ್ಯಾಜ್ಯದ ಸರಿಯಾದ ವಿಲೇವಾರಿ ಪ್ಲಾಸ್ಟಿಕ್ ಬಳಕೆಯ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲಹಾ ಸಮಿತಿಯ ಸದಸ್ಯರು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಮುಂದಾಗಬೇಕು ಎಂದು ತಿಳಿಸಿದರು.ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಜಿಲ್ಲಾ ಸಂಯೋಜಕ ಶಿವಾನಂದ ಬಡಿಗೇರ ಮಾತನಾಡಿ, ರಾಜ್ಯಾದ್ಯಂತ ಸಾಂಕ್ರಾಮಿಕ ರೋಗಗಳಾದ ಡೆಂಘೀ, ಮಲೇರಿಯಾ ಹಾಗೂ ಚಿಕುನಗುನ್ಯಾ ತೀವ್ರವಾಗಿ ಹರಡುತ್ತಿವೆ. ಮುಂಜಾಗ್ರತಾ ಕ್ರಮವಾಗಿ ನೀರು ಮತ್ತು ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.ನೀರಿನ ಪ್ರಮುಖ ಮೂಲಗಳಾದ ಬೋರವೆಲ್‌ಗಳ ಹತ್ತಿರ ಸ್ವಚ್ಛತೆ ಕಾಪಾಡದೇ ಇರುವುದರಿಂದ ನೀರು ಕಲುಷಿತಗೊಂಡು ಹಲವಾರು ರೋಗಗಳಿಗೆ ಕಾರಣವಾಗುತ್ತದೆ. ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ತಾಲೂಕು ಸಂಯೋಜಕ ಮಲ್ಲಿಕಾರ್ಜುನ ಉಕ್ಕಲಿ, ಪಂಚಾಯತಿ ಕಾರ್ಯದರ್ಶಿ ರೇವಣಸಿದ್ದ ಕೋಲಕಾರ, ಪಂಚಾಯತಿ ಸಿಬ್ಬಂದಿ ವಿಕಾಸ ಜೋಗಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.