ಸಾರಾಂಶ
ರಾಯಚೂರು: ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಂ ಹೇಳಿದರು.
ರಾಯಚೂರು: ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಂ ಹೇಳಿದರು.
ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನ.19 ರಿಂದ ಡಿ.10ರವರೆಗೆ ಆಯೋಜಿಸಲಾಗಿರುವ “ನಮ್ಮ ಶೌಚಾಲಯ ನಮ್ಮ ಗೌರವ” ವಿಶೇಷ ಆಂದೋಲನಕ್ಕೆ ಮಂಗಳವಾರ ನಗರದ ಜಿಪಂ ಕಚೇರಿ ಆವರಣದಲ್ಲಿರುವ ಜಲನಿರ್ಮಲ ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.ನಮ್ಮ ಶೌಚಾಲಯ ನಮ್ಮ ಗೌರವ ಎಂಬ ಶೀರ್ಷಿಕೆ ಹಾಗೂ ಅಂದದ ಶೌಚಾಲಯ–ಆನಂದದ ಜೀವನ ಘೋಷವಾಕ್ಯದೊಂದಿಗೆ ವಿಶೇಷ ಆಂದೋಲನವನ್ನು ಆಯೋಜಿಸಬೇಕು. ಜೊತೆಗೆ ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸಲು ವಿವಿಧ ಇಲಾಖೆಗಳಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶೌಚಾಲಯ ಆಂದೋಲನಕ್ಕೆ ಸಹಯೋಗ ನೀಡಿ, ಶೌಚಾಲಯ ಇಲ್ಲದಿರುವ ಆಸ್ಪತ್ರೆ, ಅಂಗನವಾಡಿ ಹಾಗೂ ಶಾಲೆಗಳನ್ನು ಪಟ್ಟಿ ಮಾಡಿ ಶೌಚಾಲಯ ನಿರ್ಮಾಣಕ್ಕೆ ಅಭಿಯಾನದ ಅವಧಿಯಲ್ಲಿ ವೈಯಕ್ತಿಕ ಶೌಚಾಲಯಗಳ ನೋಂದಣಿ ಹೆಚ್ಚಾಗಬೇಕು ಎಂದರು.
ಸಾಮೂಹಿಕ ಅಥವಾ ಸಮುದಾಯ ಶೌಚಾಲಯಗಳನ್ನು ಕ್ರಿಯಾತ್ಮಕಗೊಳಿಸಬೇಕು. ಸಾಂಸ್ಥಿಕ ಶೌಚಾಲಯಗಳನ್ನು ಹೆಚ್ಚು ಬಳಕೆ ಮಾಡುವುದರಿಂದ ಅವುಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು. ಘನತ್ಯಾಜ್ಯನ ವಿಲೇ ಸೇವೆಗಳು ಉತ್ತಮಪಡಿಸಿ ಕಸದ ವಿಂಗಡನೆ ಹಾಗೂ ಲಾಭದಾಯಕ ವಿಲೇವಾರಿ, ಘಟಕಗಳ ಪರಿಣಾಮಕಾರಿ ಚಾಲನೆಗೆ ಕ್ರಮವಹಿಸಿ ಡಿ.10ರೊಳಗಾಗಿ ಶೌಚಾಲಯಗಳ ಬಗ್ಗೆ ಅಗತ್ಯ ಅಂಕಿ ಅಂಶಗಳನ್ನು ಕಲೆಹಾಕಿ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಬಳಕೆದಾರರಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲು ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಈಗಾಗಲೇ ಇರುವ ಶೌಚಾಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಇನ್ನೂ ರೋಗಿಗಳು, ಮಕ್ಕಳು ಹಾಗೂ ಹದಿ ಹರೆಯದವರಿಗೆ ಅಂಗನವಾಡಿ, ಆಶಾ ಹಾಗೂ ಶಿಕ್ಷಕರು ಜಾಗೃತಿ ಮೂಡಿಸುವುದು. ಮತ್ತು ಶಾಲೆಗಳಲ್ಲಿ ಈ ಕುರಿತು ನಾಟಕ, ಕಿರುಚಿತ್ರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾಮಾಜಿಕ ಜಾಣತಾಣಗಳಾದ ಫೆಸ್ಬುಕ್, ಟ್ವೀಟರ್ ಮತ್ತು ಯುಟೂಬ್ನಲ್ಲಿ ಶೌಚಾಲಯ ಆಂದೋಲನದ ಬಗ್ಗೆ ಮಾಹಿತಿಯನ್ನು ಪ್ರಚಾರ ಪಡಿಸುವಂತೆ ಸೂಚಿಸಿದರು.ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಯೋಜನಾ ನಿರ್ದೇಶಕ ಶರಣಬಸರಾಜ ಕೆಸರಟ್ಟಿ, ಡಿಎಚ್ಒ ಡಾ.ಸುರೇಂದ್ರ ಬಾಬು, ಡಿಡಿಪಿಐ ಕಾಳಪ್ಪ ಬಡಿಗೇರ, ಅಧಿಕಾರಿಗಳಾದ ನವೀನ್ ಕುಮಾರ್, ವಿನೋದ ಗುಪ್ತ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.