ಮಾದಕವಸ್ತು ವಿರುದ್ಧ ಜನಜಾಗೃತಿ ಮೂಡಿಸಿ

| Published : Jun 27 2024, 01:05 AM IST

ಸಾರಾಂಶ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನ ನೀಡಿ ತಂದೆ ತಾಯಿಯ ಕನಸು ನನಸು ಮಾಡುವಂತೆ ಹಾಗೂ ಉತ್ತಮ ಪ್ರಜೆಯಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು

ಕನ್ನಡಪ್ರಭ ವಾರ್ತೆ ಮಾಲೂರು

ಜಿಲ್ಲಾ ಪೊಲೀಸ್ ಇಲಾಖೆ ಮಾಲೂರು ಪೊಲೀಸ್ ಇಲಾಖೆ ವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಮಾದರಿ ಬಾಲಕರ ಶಾಲೆ, ವಿದ್ಯಾರ್ಥಿಗಳು ಜಾತಾ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಇನ್ಸ್‌ಪೆಕ್ಟರ್‌ ವಸಂತ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಬೇಕಾದರೆ ಮಾದಕ ವಸ್ತುಗಳ ಬಗ್ಗೆ ಜಾಗೃತರಾಗಬೇಕು ಸಾರ್ವಜನಿಕರಿಗೂ ಸಹ ಜಾಗೃತಿ ಮೂಡಿಸಬೇಕು ಎಂದರು.

ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನ ನೀಡಿ ತಂದೆ ತಾಯಿಯ ಕನಸು ನನಸು ಮಾಡುವಂತೆ ಹಾಗೂ ಉತ್ತಮ ಪ್ರಜೆಯಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು ತಂದೆ ತಾಯಿ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಕಾಲೇಜಿಗೆ ಕಳಿಸುತ್ತಾರೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಜೀವನವನ್ನು ಉಜ್ವಲವಾಗಿ ರೂಪಿಸಿಕೊಳ್ಳಿ ಎಂದರು.

ಇದೇ ಸಂದರ್ಭದಲ್ಲಿ ಜೆ.ಎಸ್.ಎಸ್. ಕಾಲೇಜು, ಸರ್ಕಾರಿ ಬಾಲಕಿಯರ ಕಾಲೇಜು, ಪಟ್ಟಣದ ಬಸ್ ನಿಲ್ದಾಣ ಹಾಗೂ ವೃತ್ತಗಳಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಮಂಜುಳ, ಪೋಲಿಸ್ ಇಲಾಖೆಯ ಪಿಎಸ್‌ಐಗಳಾದ ವರಲಕ್ಷ್ಮಮ್ಮ, ಗೀತಮ್ಮ, ಎ.ಎಸ್.ಐಗಳಾದ ಆನಂದ್, ಮುನೇಗೌಡ, ನಾರಾಯಣಸ್ವಾಮಿ, ಸಿಬ್ಬಂದಿ ಮೋಹನ್, ಉಪನ್ಯಾಸಕಾರದ ವೆಂಕಟೇಶ್, ಶಂಕರ್, ಮೋಹನ್, ಶಿಕ್ಷಕ ಆನಂದ್, ಇನ್ನಿತರರು ಹಾಜರಿದ್ದರು.