ಆತ್ಮಹತ್ಯೆ ವಿರುದ್ಧ ಅರಿವು ಮೂಡಿಸಿ

| Published : Sep 14 2024, 01:50 AM IST

ಸಾರಾಂಶ

ಸರ್ಕಾರ ಸಮುದಾಯ, ನಾಗರೀಕರು ಮತ್ತು ಮಾಧ್ಯಮಗಳು ಹಾಗೂ ಸಂಘ-ಸಂಸ್ಥೆಗಳ ಪಾತ್ರ ಬಹುಮುಖ್ಯ, ಅತಿ ಹೆಚ್ಚು ಕ್ರಿಯೆಗಳ ಮೂಲಕ ಆತ್ಮಹತ್ಯೆ ಮಾಡಿಕೊಳ್ಳದಂತೆ ಭರವಸೆ ಮೂಡಿಸಬೇಕು. ಆತ್ಮಹತ್ಯೆಗೆ ಯತ್ನಿಸಿದವರ ಮೇಲೆ ಪ್ರಕರಣಗಳನ್ನು ದಾಖಲು ಮಾಡಲಾಗುತ್ತದೆ

ಕನ್ನಡಪ್ರಭ ವಾರ್ತೆ ಕೋಲಾರಮಕ್ಕಳು ವಿದ್ಯಾರ್ಥಿಗಳು ಹಾಗೂ ರೈತರು ಸೇರಿ ಪ್ರತಿ ವರ್ಷ ೮ ಲಕ್ಷಕ್ಕಿಂತ ಹೆಚ್ಚು ಜನರು ಆತ್ಮಹತ್ಯೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದು ದೇಶದ ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂದು ನ್ಯಾಯಾಧೀಶ ಸುನಿಲ್ ಎಸ್.ಹೊಸಮನಿ ಹೇಳಿದರು.ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಘಟಕದಿಂದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲರಿಗೂ ಅರಿವು ಅಗತ್ಯ

ಆತ್ಮಹತ್ಯೆಯ ಬಗ್ಗೆ ಎಲ್ಲರಲ್ಲೂ ಅರಿವು ಮೂಡಿಸಬೇಕು. ಕೌಟುಂಬಿಕ ಕಲಹಗಳಿಂದ, ಸಣ್ಣಪುಟ್ಟ ವಿಚಾರಗಳಿಂದ ಹಾಗೂ ಯಾವುದೇ ಮಾದಕ ವಸ್ತುಗಳನ್ನು ಅಧಿಕವಾಗಿ ಬಳಸುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಕೇವಲ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಕ್ಕೆ ಸೀಮಿತವಾಗದೆ ಪ್ರತಿದಿನ ಅರಿವು ಮೂಡಿಸಬೇಕು ಎಂದರು. ಈ ನಿಟ್ಟಿನಲ್ಲಿ ಪ್ರತಿಯೊಂದು ಸರ್ಕಾರ ಸಮುದಾಯ, ನಾಗರೀಕರು ಮತ್ತು ಮಾಧ್ಯಮಗಳು ಹಾಗೂ ಸಂಘ-ಸಂಸ್ಥೆಗಳ ಪಾತ್ರ ಬಹುಮುಖ್ಯ, ಅತಿ ಹೆಚ್ಚು ಕ್ರಿಯೆಗಳ ಮೂಲಕ ಆತ್ಮಹತ್ಯೆ ಮಾಡಿಕೊಳ್ಳದಂತೆ ಭರವಸೆ ಮೂಡಿಸಬೇಕು. ಆತ್ಮಹತ್ಯೆಗೆ ಯತ್ನಿಸಿದವರ ಮೇಲೆ ಪ್ರಕರಣಗಳನ್ನು ದಾಖಲು ಮಾಡಲಾಗುತ್ತದೆ ಎಂದರು.

ಮಾನಸಿಕ ಆರೋಗ್ಯ ವೈದ್ಯಾಧಿಕಾರಿ ಡಾ.ನಾರಾಯಣಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಮಮತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪ್ರೇಮ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲ ಚಂದ್ರಪ್ಪ, ಆರ್.ಎಲ್.ಜಾಲಪ್ಪ ಆಸ್ಪತ್ರೆ ಮನೋವೈದ್ಯ ಡಾ.ಮಹಮ್ಮದ್ ಇದ್ದರು.